ಇನ್ನೊಂದು ವಾರದಲ್ಲಿ ಈ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲವೇ ಭಾರೀ ನಷ್ಟ

                           

Financial Year End: 2022-2023ರ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನೊಂದು ವಾರವಷ್ಟೇ ಬಾಕಿ ಇದೆ. ಹೊಸ ಆರ್ಥಿಕ ವರ್ಷ ಆರಂಭವಾಗುವ ಮೊದಲು ಕೆಲವು ಕೆಲಸಗಳನ್ನು ಪೂರ್ಣಗೊಳಿಸುವುದು ತುಂಬಾ ಅಗತ್ಯ. ನೀವೂ ಕೂಡ ಈ ಕೆಲಸಗಳನ್ನು ಪೂರ್ಣಗೊಳಿಸಲು ಮರೆತಿದ್ದರೆ, ಮಾರ್ಚ್ 31ರ ಮೊದಲು ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

31 ಮಾರ್ಚ್ 2023ರ ಮೊದಲು ತಪ್ಪದೇ ನಿಮ್ಮ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್  ಮಾಡಿ. ವಾಸ್ತವವಾಗಿ, 30 ಸೆಪ್ಟೆಂಬರ್ 2021 ರೊಳಗೆ ಈ ಕೆಲಸವನ್ನು ಪೂರ್ಣಗೊಳಿಸಬೇಕಿತ್ತು. ಬಳಿಕ ಈ ದಿನಾಂಕವನ್ನು 31 ಮಾರ್ಚ್ 2023ರವರೆಗೆ ವಿಸ್ತರಿಸಲಾಗಿದೆ. ನಿಗದಿತ ದಿನಾಂಕದೊಳಗೆ ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು.

2 /5

ನವೀಕರಿಸಿದ ಐ‌ಟಿ‌ಆರ್ ಫೈಲ್ ಮಾಡಲು ಮಾರ್ಚ್ 31, 2023ರವರೆಗೆ ಸಮಯವಿದೆ. ಅಷ್ಟರೊಳಗೆ ಮಿಸ್ ಮಾಡದೆ ಐ‌ಟಿ‌ಆರ್ ಫೈಲ್ ಮಾಡಿ. 

3 /5

ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸುವವರು ಮಾರ್ಚ್ 31 ರೊಳಗೆ ಡಿಮ್ಯಾಟ್ ಖಾತೆಯಲ್ಲಿ ನಾಮಿನಿಯ ಹೆಸರನ್ನು ಸೇರಿಸಬೇಕಾಗುತ್ತದೆ. ನಿಗದಿತ ದಿನಾಂಕದೊಳಗೆ ಇದನ್ನು ಮಾಡದಿದ್ದರೆ, ನಿಮ್ಮ ಡಿಮ್ಯಾಟ್ ಖಾತೆಯನ್ನು ಫ್ರೀಜ್ ಮಾಡಲಾಗುತ್ತದೆ. 

4 /5

ನೀವು ಎಲ್‌ಐಸಿಯ ಪಿಎಂ ವಂದನಾ ಯೋಜನೆಯಲ್ಲಿ ಹೂಡಿಕೆ ಮಾಡಲು ಮಾರ್ಚ್ 31, 2023 ರವರೆಗೆ ಕೊನೆಯ ಅವಕಾಶವಿದೆ. ಇದರ ನಂತರ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ. 

5 /5

ನೀವು ಹೆಚ್ಚಿನ ಪ್ರೀಮಿಯಂನೊಂದಿಗೆ ಎಲ್‌ಐ‌ಸಿ ಪಾಲಿಸಿಯ ಮೇಲೆ ತೆರಿಗೆ ಕಡಿತದ ಲಾಭವನ್ನು ಪಡೆಯಲು ಬಯಸಿದರೆ, ನಂತರ ಅದನ್ನು ಮಾರ್ಚ್ 31, 2023 ರ ಮೊದಲು ಚಂದಾದಾರರಾಗಿರಬೇಕು.