ಬೆಂಗಳೂರು : ಆಧಾರ್ ಕಾರ್ಡ್ನೊಂದಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಪ್ರತಿಯೊಬ್ಬ ಭಾರತೀಯ ನಾಗರಿಕರು ಪೂರ್ಣಗೊಳಿಸಲೇಬೇಕಾದ ಕೆಲಸ. ಇದೀಗ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಈಗ ಜೂನ್ 30 2023 ರವರೆಗೆ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ನೊಂದಿಗೆ ಲಿಂಕ್ ಮಾಡಬಹುದಾಗಿದೆ. ಇದಕ್ಕೂ ಮೊದಲು ಮಾರ್ಚ್ 31, 2023ರೊಳಗೆ ಪ್ಯಾನ್ನೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವುದು ಅನಿವಾರ್ಯವಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಮಾರ್ಚ್ 31, ಸರ್ಕಾರ ನಿಗದಿ ಮಾಡಿರುವ ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಆಧಾರ್ ಕಾರ್ಡ್ನೊಂದಿಗೆ ಪ್ಯಾನ್ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ಹಲವು ಬಾರಿ ಸೂಚಿಸಿದೆ. ಐಟಿ ಕಾಯಿದೆ, 1961 ರ ಪ್ರಕಾರ, ವಿನಾಯಿತಿ ಪಡೆದ ವರ್ಗಕ್ಕೆ ಸೇರದ ಪ್ರತಿಯೊಬ್ಬರೂ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ ಲಿಂಕ್ ಮಾಡದ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯವಾಗುತ್ತದೆ.
ಇದನ್ನೂ ಓದಿ : PAN-Aadhaar Link: ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಜೊತೆ ಲಿಂಕ್ ಆಗಿದೆಯೇ? ಈ ರೀತಿ ಚೆಕ್ ಮಾಡಿ
ಮಾರ್ಚ್ 31 2022 ಕ್ಕಿಂತ ಮೊದಲು ಆಧಾರ್ನೊಂದಿಗೆ ಪ್ಯಾನ್ ಲಿಂಕ್ ಮಾಡುವ ಪ್ರಕ್ರಿಯೆ ಉಚಿತವಾಗಿತ್ತು. ನಂತರ ಜೂನ್ 30, 2022 ರವರೆಗೆ 500 ರೂಪಾಯಿ ಪಾವತಿಸಿ ಈ ಕೆಲಸ ಮಾಡಬಹುದಾಗಿತ್ತು. ನಂತರ ಈಗ 1000 ರೂಪಾಯಿ ದಂಡವನ್ನು ಪಾವತಿಸುವ ಮೂಲಕ ಮಾರ್ಚ್ 31, 2023 ರವರೆಗೆ ಆಧಾರ್ ಪ್ಯಾನ್ ಅನ್ನು ಲಿಂಕ್ ಮಾಡಬಹುದಾಗಿತ್ತು. ಆದರೆ ಈಗ ಈ ಗಡುವನ್ನು ಜೂನ್ 30, 2023ರವರೆಗೆ ವಿಸ್ತರಿಸಲಾಗಿದೆ. ಒಂದೊಮ್ಮೆ ಈ ಅವಧಿಯ ಒಳಗೂ ಪ್ಯಾನ್ - ಆಧಾರ್ ಲಿಂಕ್ ಮಾಡಲು ವಿಫಲವಾದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಪ್ಯಾನ್ನೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಪ್ರಕ್ರಿಯೆಯು ಸರಳವಾಗಿದೆ. ಇದನ್ನು ಆನ್ಲೈನ್ ಮೂಲಕ ಸುಲಭವಾಗಿ ಮಾಡಬಹುದಾಗಿದೆ.
ಇದನ್ನೂ ಓದಿ : ಇಪಿಎಫ್ಒ ಚಂದಾದಾರರಿಗೆ ಜಾಕ್ಪಾಟ್ !ಬಡ್ಡಿ ದರದಲ್ಲಿ ಏರಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.