BSY ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ: ಕಾಂಗ್ರೆಸ್

Karnataka Reservation Issue: ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ "ಸಂತೋಷ"ದ ಕಾರಣಕ್ಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Mar 28, 2023, 05:09 PM IST
  • ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ದಾರಗಳಲ್ಲಿ ಅವರ ಪಾತ್ರವಿಲ್ಲ
  • ಆದರೂ ಸರ್ಕಾರದ ಅವಾಂತರಕ್ಕೆ ಬಿ.ಎಸ್.ಯಡಿಯೂರಪ್ಪನವರ ಮನೆ ಮೇಲೆ ದಾಳಿ ಆಗಿದ್ದೇಕೆ?
  • ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ
BSY ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ: ಕಾಂಗ್ರೆಸ್ title=
‘ಸಂತೋಷ ಕೂಟ’ದ ವಿರುದ್ಧ ಕಾಂಗ್ರೆಸ್ ಟೀಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತವೆಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘BSYಯವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ದಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ BSY ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ’ ಎಂದು ಕುಟುಕಿದೆ.

ಇದನ್ನೂ ಓದಿ: ಬಿಜೆಪಿಯ ಆಂತರಿಕ ಕುತಂತ್ರದಿಂದ ಯಡಿಯೂರಪ್ಪ ಮನೆ ಮೇಲೆ ದಾಳಿ: ಡಿಕೆಶಿ

‘ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ "ಸಂತೋಷ"ದ ಕಾರಣಕ್ಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಬಿಜೆಪಿಯ ನಕಲಿ ಚುನಾವಣಾ ತಂತ್ರಗಳು ತಿರುಗುಬಾಣವಾಗಿ ಬಿಜೆಪಿಯನ್ನೇ ಅಟ್ಟಾಡಿಸುತ್ತಿದೆ! ಬಂಜಾರಾ ಸೇರಿದಂತೆ ಹಲವು ಸಮುದಾಯಗಳು ಸರ್ಕಾರದ ವಿರುದ್ದ ಸಿಡಿದು ನಿಲ್ಲುವ ಮೂಲಕ ಬಿಜೆಪಿಯ ಅವನತಿಗೆ ಮುನ್ನುಡಿ ಬರೆಯುವುದು ನಿಶ್ಚಿತ. ಸಿಎಂ ಬಸವರಾಜ್ ಬೊಮ್ಮಾಯಿಯವರೇ, ಸಾಧನೆ, ಯೋಜನೆ ತೋರಿಸದೆ, ಮೂಗಿಗೆ ತುಪ್ಪ ಸವರುವ ರಾಜಕಾರಣವನ್ನು ಜನತೆ ತಿರಸ್ಕರಿಸಿದ್ದಾರೆ’ ಎಂದು ಟೀಕಿಸಿದೆ.

ಇದನ್ನೂ ಓದಿ: ಬಿಜೆಪಿಗೆ ಬಿಸಿ ತುಪ್ಪವಾದ ಒಳಮೀಸಲಾತಿ ಅಸ್ತ್ರ

‘ಬಿಜೆಪಿಯ ಹಿಂದಿನ ಅಧಿಕಾರವಧಿಯಲ್ಲಿ ಸಿಎಂ ಸೇರಿ ಸಾಲು ಸಾಲಾಗಿ ಬಿಜೆಪಿಗರು ಪರಪ್ಪನ ಅಗ್ರಹಾರಕ್ಕೆ ಅತಿಥಿಗಳಾಗಿದ್ದರು. ಈಗ ಮಾಡಾಳ್‌ರಿಂದ ಮತ್ತೆ ಬಿಜೆಪಿಯ ಜೈಲು ಪರ್ವ ಶುರುವಾಗಿದೆ. ಕಾಕಂಬಿ ಹಗರಣದ ಪ್ರಾಮಾಣಿಕ ತನಿಖೆ ನಡೆದರೆ ಮಾಡಾಳ್‌ರಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರೂ ಜೈಲಿನ ಸಂಗಾತಿಯಾಗಿ ಹೋಗಬೇಕಾಗುತ್ತದೆ!’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
   

Trending News