Bangalore-Varanasi Flight Emergency Landing: ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನಯಾನ ಸಂಸ್ಥೆ ಇಂಡಿಗೋ ವಿಮಾನ (6E897) ಮಂಗಳವಾರ ಬೆಳಗ್ಗೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೆಳಿಗ್ಗೆ 5.10ಕ್ಕೆ ಬೆಂಗಳೂರಿನಿಂದ ಹೊರಟಿದ್ದ ಇಂಡಿಗೋದ 6E897 ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ 137 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ- ಚುನಾವಣೆ ಹೊತ್ತಲ್ಲಿ ದಾಖಲೆಯಿಲ್ಲದ ವಿದೇಶಿ ಕರೆನ್ಸಿ ಸೀಜ್ ಮಾಡಿದ ಬನಶಂಕರಿ ಪೊಲೀಸರು
ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದಾಗಿ ಬೆಳಿಗ್ಗೆ 06:15ರ ಸುಮಾರಿಗೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದಾಗ್ಯೂ, ವಿಮಾನದಲ್ಲಿದ್ದ ಎಲ್ಲಾ 137 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದೆ.
Varanasi-bound IndiGo Flight (6E897) from Bengaluru having 137 passengers onboard made an emergency landing, due to a technical problem, at Shamshabad Airport in Telangana at 6.15 am today morning. All passengers are safe: DGCA pic.twitter.com/pblZR2op5l
— ANI (@ANI) April 4, 2023
ಇದನ್ನೂ ಓದಿ- Corona New Wave: ಕೊರೊನಾ ಪ್ರಕರಣಗಳಲ್ಲಿ ಭಾರೀ ಹೆಚ್ಚಳ.. ಭಾರತದಲ್ಲಿ ಮತ್ತೆ ತಲ್ಲಣ ಸೃಷ್ಟಿಸಲಿದ್ಯಾ ಕೋವಿಡ್ ಹೊಸ ಅಲೆ?
ಇದಲ್ಲದೆ, ವಿಮಾನ ತುರ್ತು ಭೂಸ್ಪರ್ಶದ ಬಳಿಕ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರಿಗೂ ಕೂಡ ಬೇರೆ ವಿಮಾನದಲ್ಲಿ ವ್ಯವಸ್ಥೆಯನ್ನೂ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.