Malavika Avinash admitted to the hospital : ನಟಿ ಹಾಗೂ ರಾಜಕಾರಣಿ ಮಾಳವಿಕಾ ಅವಿನಾಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಆರೋಗ್ಯದ ಸಮಸ್ಯೆಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ರೀತಿಯ ಸಮಸ್ಯೆ ಬಂದಾಗ ನಿರ್ಲಕ್ಷ್ಯ ಮಾಡಬೇಡಿ ಎಂದು ಫ್ಯಾನ್ಸ್ಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: Kabzaa 2: ತಲೆಗೆ ಹುಳಬಿಟ್ಟ ಕಬ್ಜ 2 ಪೋಸ್ಟರ್.. ಖಾಲಿ ಕುರ್ಚಿಗೆ ಒಡೆಯನಾರು?
ಮಾಳವಿಕಾ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದು, ಇದನ್ನು ಯಾರೂ ಹಗುರವಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ. ಸುಮ್ಮನೆ ತಲೆ ನೋವು ಎಂದುಕೊಂಡರೆ ನನ್ನಂತೆ ಆಸ್ಪತ್ರೆಗೆ ಸೇರಬೇಕಾಹಬಹುದು ಎಂದು ಸಣ್ಣ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಆಸ್ಪತ್ರೆಯ ಬೆಡ್ ಮೇಲಿರುವ ಸೆಲ್ಫಿಯನ್ನು ಮಾಳವಿಕಾ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ತಮ್ಮ ಆರೋಗ್ಯ ಸ್ಥಿತಿಯ ಅಪ್ಡೇಟ್ ನೀಡಿದ್ದು, ಚೇತರಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಫೋಟೋದಲ್ಲಿರುವವರು ನಿಜವಾಗಿಯೂ ಅವರೇ ಎಂದು ಅನುಮಾನಿಸುವಷ್ಟು ಮಾಳವಿಕಾ ಮುಖ ಬದಲಾಗಿದೆ. ಇದು ಅವರ ಅಭಿಮಾಣಿಗಳ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Kantara Movie : ಕುಡ್ಲ ಜನರಿಗೆ ಕಾಂತಾರ ಸಿನಿಮಾ ತಂಡದಿಂದ ಗುಡ್ ನ್ಯೂಸ್!
ಮಾಳವಿಕಾ ಶೀಘ್ರ ಗುಣಮುಖರಾಗಿ ಮನೆಗೆ ಮರಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳನ್ನು ಹಾಗೂ ಹಿರಿತೆರೆಯಲ್ಲಿ ಅನೇಕ ಸಿನಿಮಾಗಳಲ್ಲಿ ಮಾಳವಿಕಾ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರುವ ಮೂಲಕ ರಾಜಕಾರಣಿಯಾಗಿಯೂ ಮಾಳವಿಕಾ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿಯೂ ಮಾಳವಿಕಾ ಅಭಿನಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.