ಬೆಂಗಳೂರು: ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ, ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ದ್ವಂದ್ವ ಹೇಳಿಕೆ ನೀಡುವ ಮೂಲಕ ಈಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಮುಂದಿನ ನಡೆಯನ್ನು ಇನ್ನೂ ರಹಸ್ಯವಾಗಿ ಇಟ್ಟಿದ್ದಾರೆ.
ಇದನ್ನೂ ಓದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೀಟು ಮೀಸಲಿಟ್ಟ ಕಾಂಗ್ರೆಸ್...!
ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾನು ಬಿಜೆಪಿ ಕಟ್ಟಿ ಬೆಳಸಿದ ವ್ಯಕ್ತಿ, ಹಾಗಾಗಿ ಪಕ್ಷಕ್ಕೆ ರಾಜೀನಾಮೆ ನೀಡೋದು ನೋವಾಗ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟಿಕೆಟ್ ನೀಡದಿರುವ ಬೆನ್ನಲ್ಲೇ ಫೈಟರ್ ರವಿ ಬಿಜೆಪಿಗೆ ರಾಜೀನಾಮೆ
ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಏನಾದರೂ ಸೇರುತ್ತೀರಾ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್ 'ನಾನಿನ್ನು ರಾಜೀನಾಮೆ ನೀಡಿಲ್ಲ, ನೀಡಿದ ಮೇಲೆ ಕಾಂಗ್ರೆಸ್ ನವರನ್ನ ಭೇಟಿಯಾಗೋದು.ಆದರೆ ಇದುವರೆಗೆ ನಾನು ಕಾಂಗ್ರೆಸ್ ನವರನ್ನ ಭೇಟಿ ಮಾಡಿಲ್ಲ ಇನ್ನ ಎರಡು ದಿನದಲ್ಲಿ ತೀರ್ಮಾನ ತೊಗೋತೀನಿ ಎಂದು ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.