ನವದೆಹಲಿ: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಪ್ರಿಯಾಂಕಾ ಗಾಂಧಿ ಈಗ ಟ್ವಿಟ್ಟರ್ ಗೂ ಕೂಡ ಅಧಿಕೃತವಾಗಿ ಪ್ರವೇಶಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ಇಂದು ಪಕ್ಷದ ಕಾರ್ಯಕರ್ತರನ್ನು ತಲುಪುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರದಂದು ಟ್ವಿಟ್ಟರ್ ಗೆ ಪ್ರವೇಶಿಸಿದ್ದಾರೆ.ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆ "ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ಗೆ ಪ್ರವೇಶಿಸಿದ್ದಾರೆ. ಅವರನ್ನು @priyankagandhi ಖಾತೆ ಮೂಲಕ ಫಾಲೋ ಮಾಡಬಹುದು ಎಂದು ತಿಳಿಸಿದೆ.
Smt. Priyanka Gandhi Vadra is now on Twitter. You may follow her at @priyankagandhi
— Congress (@INCIndia) February 11, 2019
ಅಚ್ಚರಿಯೆಂದರೆ ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಗೆ ಪ್ರವೇಶಿಸಿದ ಕೇವಲ 9 ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಟ್ವಿಟ್ಟರ್ ಫಾಲೋವರ್ಸ್ ಗಳು ಅವರನ್ನು ಹಿಂಬಾಲಿಸಿದ್ದಾರೆ. ಆ ಮೂಲಕ ಟ್ವಿಟ್ಟರ್ ನಲ್ಲಿಯೂ ಕೂಡ ಪ್ರಿಯಾಂಕ್ ಗಾಂಧಿ ಹೊಸ ಅಲೆಯನ್ನು ಸೃಷ್ಟಿಸಿದ್ದಾರೆ.ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಆಗಮನಕ್ಕೆ ಶಶಿ ತರೂರ್ ಸೇರಿದಂತೆ ಹಲವಾರು ನಾಯಕರು ಸ್ವಾಗತಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷವು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚಿಗೆ ನೇಮಕ ಮಾಡಿತ್ತು.ಈಗ ಅವರ ಪ್ರವೇಶದ ನಂತರ ಉತ್ತರ ಪ್ರದೇಶದಲ್ಲಿ ರಾಜಕೀಯ ಲೆಕ್ಕಾಚಾರಗಳು ಬದಲಾಗುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.