ಬೆಂಗಳೂರು: ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಎರಡು ಪೋಸ್ಟ್ ಗಳು ಒಗಟಿನಿಂದ ಕೂಡಿದ್ದರು ಸಹ ಅವು ಪರೋಕ್ಷವಾಗಿ ಸದ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಕನ್ನಡಿ ಹಿಡಿಯುತ್ತವೆ.
ಈ ಹಿಂದೆ ಅನಂತ್ ಕುಮಾರ್ ನಿಧನದ ನಂತರ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಸುಲಭವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ದೊರೆಯುತ್ತದೆ ಎಂದು ಭಾವಿಸಲಾಗಿತ್ತು, ಆದರೆ ಆಗ ಕೊನೆಯ ಹಂತದಲ್ಲಿ ಟಿಕೆಟ್ ತಪ್ಪಿತ್ತು. ಆದರೆ ಈ ಬಾರಿಯಾದರೂ ವಿಧಾನಸಭಾ ಟಿಕೆಟ್ ನ್ನು ಅವರಿಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಅವರಿಗೆ ಈ ಬಾರಿಯೂ ಕೂಡ ಬಿಜೆಪಿ ಟಿಕೆಟ್ ಸಿಗದೇ ಇರುವುದು ಈಗ ತೀವ್ರ ಅಸಮಾಧಾನವನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ.
ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ,
ಆದರೆ ಮೌನ ಮಾತ್ರ ಬಂಗಾರ.
ಏನಂತಿರಿ ?— Tejaswini AnanthKumar (@Tej_AnanthKumar) April 17, 2023
ಇತ್ತ ಬಿಜೆಪಿ ಹಿರಿಯ ನಾಯಕರಾಗಿದ್ದ ಲಕ್ಷ್ಮಣ್ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮಗೆ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ಎರಡು ಮಾರ್ಮಿಕವಾಗಿರುವ ಪೋಸ್ಟ್ ಗಳ ಮೂಲಕ ಅಸಮಾಧಾನ ತೋಡಿಕೊಂಡಿದ್ದಾರೆ.ಒಂದು ಪೋಸ್ಟ್ ನಲ್ಲಿ "ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ.ಏನಂತಿರಿ ?" ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನೊಂದು ಪೋಸ್ಟ್ ವೊಂದರಲ್ಲಿ ಅವರು ಮುದುದಿರುವ ಗಿಡದ ಚಿತ್ರವನ್ನು ಹಂಚಿಕೊಂಡು "ಈ ಗಿಡ ಜೂನ್ 5, 2015 ರಂದು ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್ ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ.ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ." ಎಂದು ಬರೆದುಕೊಂಡಿದ್ದಾರೆ.
ಈ ಗಿಡ ಜೂನ್ 5, 2015 ರಂದು ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ.ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್ ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ.
ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ.@adamya_chetana @AnanthKumar_BJP pic.twitter.com/17f054bhFu— Tejaswini AnanthKumar (@Tej_AnanthKumar) April 17, 2023
ಇದಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರೊಬ್ಬರು "ರಾಜಕೀಯದಲ್ಲಿ ಮೌನಕ್ಕೆ ಅರ್ಥವಿಲ್ಲ ಮೇಡಂ, ನಿಮ್ಮಂತವರು ನಿಮ್ಮ ಹಕ್ಕುಗಳಿಗಾಗಿ ಹೋರಾಡಬೇಕು' ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.