Weight Loss with Papaya: ನಮ್ಮಲ್ಲಿ ಹಲವರು ಬೊಜ್ಜಿನ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇದಕ್ಕೆ ಮುಖ್ಯ ಕಾರಣ ನಾವು ಸೇವಿಸುವ ಆಹಾರ. ಎಣ್ಣೆಯುಕ್ತ ಮತ್ತು ಸಿಹಿ ಆಹಾರಗಳ ಅತಿಯಾದ ಸೇವನೆಯು ತೂಕ ಹೆಚ್ಚಾಗಲು ಕಾರಣವಾಗುತ್ತದೆ.
ಬೆಂಗಳೂರು : ನಾವು ಸೇವಿಸುವ ಆಹಾರದ ಪ್ರಮಾಣವನ್ನು ಕಡಿಮೆ ಮಾಡಿದರೆ, ದೇಹ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸುತ್ತೇವೆ. ಆದರೆ ಆಹಾರ ಸೇವನೆ ಕಡಿಮೆ ಮಾಡುವುದರಿಂದ ದೇಹದ ತೂಕ ಕಡಿಮೆಯಾಗುವುದಿಲ್ಲ, ಅದು ನಮ್ಮ ದೇಹದ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಬದಲಿಗೆ, ಕೆಲವು ಸರಳ ಮನೆಮದ್ದುಗಳಿಂದ ತೂಕವನ್ನು ಕಳೆದುಕೊಳ್ಳಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅಧಿಕ ತೂಕದಿಂದ ಬಳಲುತ್ತಿರುವವರು ಪಪ್ಪಾಯ ಸೇವಿಸಬಹುದು. ಇದರಲ್ಲಿ ನಾರಿನಂಶ ಅಧಿಕವಾಗಿದ್ದು ನಿಮ್ಮ ಆಹಾರವನ್ನು ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ. ಪಪ್ಪಾಯಿಯದಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಅಧಿಕವಾಗಿರುತ್ತದೆ. ಇದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಪಪ್ಪಾಯಿಯು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಪಪ್ಪಾಯ ಹಣ್ಣನ್ನು ಹೇಗೆ ಸೇವಿಸಬಹುದು ಎಂಬುದು ಇಲ್ಲಿದೆ
ಮೊಸರಿನೊಂದಿಗೆ ಪಪ್ಪಾಯವನ್ನು ತಿನ್ನಬಹುದು. ಇದನ್ನು ಬೆಳಗಿನ ಉಪಾಹಾರಕ್ಕೆ ತಿನ್ನಬಹುದು. ಇದರೊಂದಿಗೆ ಇತರ ಹಣ್ಣುಗಳನ್ನು ಸೇರಿಸಬಹುದು. ಇದಕ್ಕೆ ನೆನೆಸಿದ ಡ್ರೈ ಫ್ರೂಟ್ಸ್ ಕೂಡಾ ಸೇರಿಸಬಹುದು, ಹೀಗೆ ತಿನ್ನುವುದರಿಂದ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ.
ಬೆಳಗಿನ ಉಪಾಹಾರಕ್ಕಾಗಿ ಒಂದು ಲೋಟ ಕೆನೆ ಹಾಲು ಮತ್ತು ಪಪ್ಪಾಯ ಸೇವಿಸಿ. ಇದು ದೇಹಕೆ ಪ್ರೋಟೀನ್ ಅನ್ನು ನೀಡುತ್ತದೆ. ತೂಕ ಇಳಿಸಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ.
ನೀವು ಸಾದಾ ಪಪ್ಪಾಯ ತಿನ್ನಲು ಇಷ್ಟಪಡದಿದ್ದರೆ, ಪಪ್ಪಾಯ ಚಾಟ್ ಅನ್ನು ಸೇವಿಸಬಹುದು. ಇದಕ್ಕಾಗಿ ಪಪ್ಪಾಯವನ್ನು ತುಂಡುಗಳಾಗಿ ಕತ್ತರಿಸಿ ಅದರ ಮೇಲೆ ಬ್ಲಾಕ್ ಸಾಲ್ಟ್ ಮತ್ತು ಕರಿಮೆಣಸಿನ ಪುಡಿಯನ್ನು ಸಿಂಪಡಿಸಿ ತಿನ್ನಿರಿ ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಸ್ವೀಕರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಅನುಮೋದಿಸುವುದಿಲ್ಲ.)