ಕಾಬೂಲ್: ಆಫ್ಘಾನಿಸ್ತಾನದ ಲಾಘ್ಮನ್ ಪ್ರಾಂತ್ಯದಲ್ಲಿ ಮಂಗಳವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಖ್ವಾರ್ಘಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಈ ಸ್ಫೋಟದಲ್ಲಿ ಐಇಡಿ ಬಾಂಬ್ ಬಳಸಲಾಗಿದೆ ಎನ್ನಲಾಗಿದೆ.
TOLOnews: At least six people were killed in an IED blast in Qarghaee district in Laghman province at around 11am today. #Afghanistan
— ANI (@ANI) February 19, 2019
ಮೂರು ದಿನಗಳ ಹಿಂದೆ ಕಾಬೂಲ್'ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟು 100ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದರು. ತಾಲಿಬಾನ್ ಉಗ್ರ ಸಂಘಟನೆ ಈ ದಾಳಿ ನಡೆಸಿದ್ದು, ಸುತ್ತಮುತ್ತಲಿನ ಪ್ರದೇಶಗಳ ಮನೆಗಳು ಸಂಪೂರ್ಣ ನಾಶವಾಗಿದ್ದವು.
ಇತ್ತ ಭಾರತದಲ್ಲಿಯೂ ಪುಲ್ವಾಮಾದಲ್ಲಿ ಇತ್ತೀಚೆಗೆ ಭಯೋತ್ಪಾದಕರು ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದರು.