ನಾಳೆ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಪರ ಕಿಚ್ಚ ಸುದೀಪ್ ರೋಡ್ ಶೋ

ಈಗಾಗಲೇ ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ರಾಜ್ಯದೆಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ,ಈಗ ಇದರ ಮುಂದುವರೆದ ಭಾಗವಾಗಿ ನಾಳೆಯಿಂದ ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

Written by - Zee Kannada News Desk | Last Updated : Apr 30, 2023, 10:14 PM IST
  • ಬಿಜೆಪಿಯ ಐದು ಕಾರ್ಯಕ್ರಮಗಳಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ ಎಂದು ಪಕ್ಷವು ಖಚಿತಪಡಿಸಿದೆ
  • ಬೆಳಗ್ಗೆ 11.20 ಬೆಳಗಾವಿ ಜಿಲ್ಲೆಯ ಕಿತ್ತೂರಿನ ನೇಸರ್ಗಿಯಲ್ಲಿ ಅವರು ಪಕ್ಷದ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಪರ ಕಿಚ್ಚ ಸುದೀಪ್ ರೋಡ್ ಶೋ title=
file photo

ಬೆಳಗಾವಿ : ಈಗಾಗಲೇ ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ರಾಜ್ಯದೆಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ,ಈಗ ಇದರ ಮುಂದುವರೆದ ಭಾಗವಾಗಿ ನಾಳೆಯಿಂದ ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಇದನ್ನೂ ಓದಿ: "ನನ್ನ ಮತ್ತು‌ ನನ್ನ ಸಂಬಂಧಿಕರ ಮನೆ ಮೇಲೆ ರೇಡ್ ಮಾಡುವ ಹುನ್ನಾರ ನಡೆದಿದೆ"

ನಾಳೆ ಬೆಳಗಾವಿಯಲ್ಲಿ ಬಿಜೆಪಿಯ ಐದು ಕಾರ್ಯಕ್ರಮಗಳಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ ಎಂದು ಪಕ್ಷವು ಖಚಿತಪಡಿಸಿದೆ.ಬೆಳಗ್ಗೆ 11.20 ಬೆಳಗಾವಿ ಜಿಲ್ಲೆಯ ಕಿತ್ತೂರಿನ ನೇಸರ್ಗಿಯಲ್ಲಿ ಅವರು ಪಕ್ಷದ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ತದನಂತರ ಬೆಳಗಾವಿ ಜಿಲ್ಲೆಯ ಗ್ರಾಮೀಣ ಕ್ಷೇತ್ರದಲ್ಲಿ ಬರುವ ತಾರಿಹಾಳದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗುವ ರೋಡ್ ಶೋ ಮೂಲಕ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ಖಾನಾಪುರ ಕೈ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಪರ ಪ್ರಿಯಾಂಕಾ ಪ್ರಚಾರ

ಇನ್ನೂ ಸಂಜೆ 4 ರಿಂದ ಹಿಡಿದು 6,40 ರವರೆಗೆ ಅವರು ಜಿಲ್ಲೆಯ ಪ್ರಮುಖ ಕ್ಷೇತ್ರಗಳಾದ ಯಮಕನ ಮರಡಿ, ಬೆಳಗಾವಿ ಉತ್ತರ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರಗಳಲ್ಲಿ ನಡೆಯವ ರೋಡ್ ಶೋ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News