ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪಾಕಿಸ್ತಾನ ಧ್ವಜವಿರುವ ಕರಪತ್ರ ಹಂಚಿಕೆ; ಮುನಿರತ್ನ ವಿರುದ್ಧ ಕುಸುಮಾ ಗರಂ

Kusuma Hanumantharayappa : ಚುನಾವಣೆ ಸಮೀಪಿಸುತ್ತಿದ್ದಂತೆ ಕಾವು ಎಲ್ಲಡೆ ಹೆಚ್ಚಾಗುತ್ತಿದೆ. ಕದನ ಕಲಿಗಳು ಕರುನಾಡ ಕುರುಕ್ಷೇತ್ರಕ್ಕೆ ಭರ್ಜರಿ ತಯಾರಿಯಲ್ಲಿದ್ದಾರೆ. ಸದ್ಯಕ್ಕೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಅಬ್ಬರದಿಂದ ಸಾಗುತ್ತಿದ್ದು, ಈ ಮಧ್ಯೆ  ಆರ್‌ ಆರ್‌ ನಗರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ವಿರುದ್ಧ ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.  

Written by - Zee Kannada News Desk | Last Updated : May 1, 2023, 11:39 AM IST
  • ಬಿಜೆಪಿಯ ಮುನಿರತ್ನ ಅವರು ತಮ್ಮ ಬೆಂಬಲಿಗರನ್ನೇ ಪಕ್ಷೇತರವಾಗಿ ಕಣಕ್ಕಿಳಿಸಿದ್ದು,
  • ಪಕ್ಷೇತರ ಅಭ್ಯರ್ಥಿ ಪಾಕಿಸ್ತಾನ ಬಾವುಟ ಇರುವ ಕರಪತ್ರವನ್ನು ಕ್ಷೇತ್ರದಲ್ಲಿ ಹಂಚುತ್ತಿದ್ದಾರೆ
  • ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
 ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪಾಕಿಸ್ತಾನ ಧ್ವಜವಿರುವ ಕರಪತ್ರ ಹಂಚಿಕೆ; ಮುನಿರತ್ನ ವಿರುದ್ಧ ಕುಸುಮಾ ಗರಂ  title=

R R Nagar : ಬಿಜೆಪಿಯ ಮುನಿರತ್ನ ಅವರು ತಮ್ಮ ಬೆಂಬಲಿಗರನ್ನೇ ಪಕ್ಷೇತರವಾಗಿ ಕಣಕ್ಕಿಳಿಸಿದ್ದು, ಆ ಪಕ್ಷೇತರ ಅಭ್ಯರ್ಥಿ ಪಾಕಿಸ್ತಾನ ಬಾವುಟ ಇರುವ ಕರಪತ್ರವನ್ನು ಕ್ಷೇತ್ರದಲ್ಲಿ ಹಂಚುತ್ತಿದ್ದಾರೆ ಎಂದು ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಲ್ಲದೇ ಕುಸುಮಾ ಅವರು ಕರಪತ್ರ ಮತ್ತು ಪಕ್ಷೇತರ ಅಭ್ಯರ್ಥಿ ಪೋಟೋಗಳನ್ನು ತಮ್ಮ ಫೇಸ್‌ ಬುಕ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. 

"ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಬೆಂಬಲಿಗನನ್ನು‌ ಪಕ್ಷೇತರವಾಗಿ ಕಣಕ್ಕಿಳಿಸುವುದು, ನಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಬೆಂಬಲ ಸೂಚಿಸುತ್ತಿರುವಂತೆ ಪಾಕಿಸ್ತಾನದ ಧ್ವಜದೊಂದಿಗೆ ಭಿತ್ತಿಪತ್ರ ಹಂಚುವುದು, ಕ್ಷೇತ್ರದಾದ್ಯಂತ ಅವರಿಂದಲೇ ಕೋಮು ಗಲಭೆ ಸೃಷ್ಟಿಸಿ ಅದನ್ನು ಕಾಂಗ್ರೆಸ್ ತಲೆಗೆ ಕಟ್ಟುವುದು. 

 

ಇದನ್ನೂ ಓದಿ-Karnataka Assembly Elections: ಮೈಸೂರಿನಲ್ಲಿ ಪ್ರಧಾನಿ ನರೇಂದ್ರಮೋದಿ ರ‍್ಯಾಲಿಯಲ್ಲಿ ಭದ್ರತಾ ಲೋಪ- ವಿಡಿಯೋ ವೈರಲ್

ಸಾರ್ವಜನಿಕರ ಗಮನಕ್ಕೆ, "ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೊಂದಿಗೆ ಪಕ್ಷೇತರ ಅಭ್ಯರ್ಥಿ ಆರೀಫ್ ಪಾಷಾ ಅಲಿಯಾಸ್ ಯಾರಬ್ ಪಾಕಿಸ್ತಾನದ ಹೆಸರಿನಲ್ಲಿ ನನಗೆ ನಕಲಿ ಬೆಂಬಲ ಘೋಷಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಕ್ಷೇತ್ರದಲ್ಲಿ ಪದೇ ಪದೇ ಕೋಮುವಾದ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾಗೂ ಅವರ ಅನುಯಾಯಿಗಳ ವಿರುದ್ಧ ನಾಳೆ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡುತ್ತೇನೆ." 

ಸಿನಿಮಾ ಶೈಲಿಯಲ್ಲಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿ ಅಭ್ಯರ್ಥಿಯು ಚುನಾವಣೆ ಸಮಯದಲ್ಲಿ ಈ ರೀತಿ ಸುಳ್ಳು ಸುದ್ದಿಯನ್ನು ಹಬ್ಬಿಸಿ ಮತದಾರರ ಗಮನವನ್ನು ಬೇರೆಡೆ ಸೆಳೆಯುವುದರ ಜೊತೆಗೆ ಸಮಾಜದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ನಡೆಸುತ್ತಿರುವ ಹೇಯ ಕೃತ್ಯದ ಬಗ್ಗೆ ಮತದಾರರ ಗಮನಕ್ಕೆ ತರಲು ಬಯಸುತ್ತೇನೆ" ಎಂದು ಕುಸುಮಾ ಬರೆದುಕೊಂಡಿದ್ದಾರೆ. 

ಇದನ್ನೂ ಓದಿ-ನಾನು ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಬೊಮ್ಮಾಯಿ‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News