ಹುಬ್ಬಳ್ಳಿ: ಕಾಂಗ್ರೆಸ್ ಪ್ರಣಾಳಿಕೆ ಮೋಸದ ಪ್ರಣಾಳಿಕೆ. ಜನರನ್ನು ಮರಳು ಮಾಡುವ ಪ್ರಣಾಳಿಕೆ. ಜನರು ಇದನ್ನು ಧಿಕ್ಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ನವರು ನಾವು ಈಗಾಗಲೇ ಮಾಡಿದ ಕೆಲಸಗಳನ್ನೇ ತಾವು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಅನುಷ್ಠಾನ ಮಾಡಲು 6 ಲಕ್ಷ ಕೋಟಿ ರೂ. ಅನುದಾನ ಬೇಕು’ ಎಂದು ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯರಿಗೆ ಇದು ಕೊನೆ ಚುನಾವಣೆ: ಗೌರವಯುತ ನಿವೃತ್ತಿಗೆ ಅವಕಾಶ ನೀಡಿ-ಡಾ.ಯತೀಂದ್ರ ಸಿದ್ದರಾಮಯ್ಯ
ಈಗಾಗಲೇ ಬಿಜೆಪಿ ಜಾರಿಗೆ ತಂದ ಯೋಜನೆಗಳನ್ನು ಪುನಃ ಜಾರಿ ಮಾಡುವುದಾಗಿ ಹೇಳಿದ್ದಾರೆ. ‘ಜಲಜೀವನ ಮಿಷನ್’ ಮೂಲಕ ಮನೆ ಮನೆಗೆ ನಲ್ಲಿ ನೀರು ಕೊಡುವ ಕೆಲಸ ಆರಂಭಿಸಲಾಗಿದೆ. ನಾವು ಈಗಾಗಲೇ ಬಜೆಟ್ನಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದೇವೆ. ಮೀಸಲಾತಿ ಪ್ರಮಾಣ ಶೇ.75ರಷ್ಟು ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ, ಹೇಗೆ ಮಾಡುತ್ತಾರೆ? ಕೇಂದ್ರದಲ್ಲಿ ಇವರ ಸರ್ಕಾರ ಇದೇಯಾ? ಹಿಂದುಳಿದ ಜನಾಂಗ ನಿಗಮಗಳನ್ನು ಸ್ಥಾಪಿಸುವುದಾಗಿ ಹೇಳಿದೆ. ನಾನು ಈಗಾಗಲೇ ಘೋಷಣೆ ಮಾಡಿ, ಅದೇಶ ಮಾಡಿದ್ದೇನೆ. ಕಾಂಗ್ರೆಸ್ ಅದನ್ನೇ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಸಿಎಂ ಬೊಮ್ಮಾಯಿ ವ್ಯಂಗವಾಡಿದರು.
ಬಜರಂಗದಳ ನಿಷೇಧ ಅಸಾಧ್ಯ
ಬಜರಂಗದಳ ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳ ನಿಷೇದಿಸಲು ಸಾಧ್ಯವಿಲ್ಲ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಬಜರಂಗದಳ ಇಡೀ ದೇಶದಲ್ಲಿರುವ ಸಂಘಟನೆ. ಇವರಿಗೆ ದೇಶದಲ್ಲಿ ಅಧಿಕಾರವೇ ಇಲ್ಲ, ಅದನ್ನು ಹೇಗೆ ನಿಷೇಧಿಸಲು ಸಾಧ್ಯ? ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಭಜರಂಗದಳ ನಿಷೇಧಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಭಜರಂಗದಳ ನಿಷೇಧ: ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತೇವೆಂದ ಶ್ರೀರಾಮಸೇನೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.