ತೆಲುಗಿನ ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಇನ್ನಿಲ್ಲ

ಕೆಲವು ವರ್ಷಗಳ ಹಿಂದೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕೋಡಿ ರಾಮಕೃಷ್ಣ, ಸೂಕ್ತ ವೈದ್ಯಕೀಯ ಚಿಕಿತ್ಸೆಯಿಂದ ಚೇತರಿಕೆ ಕಂಡಿದ್ದರು.

Last Updated : Feb 22, 2019, 05:59 PM IST
ತೆಲುಗಿನ ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಇನ್ನಿಲ್ಲ title=

ಹೈದರಾಬಾದ್: ತೆಲುಗಿನ ಪ್ರಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ(64) ಶುಕ್ರವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಘಾ ಘಟಕದಲ್ಲಿಟ್ಟು ವೆಂಟಿಲೇಟರ್‌ನ್ನು ಅಳವಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕೋಡಿ ರಾಮಕೃಷ್ಣ, ಸೂಕ್ತ ವೈದ್ಯಕೀಯ ಚಿಕಿತ್ಸೆಯಿಂದ ಚೇತರಿಕೆ ಕಂಡಿದ್ದರು. 

80 ರ ದಶಕದ ಆರಂಭದಲ್ಲಿ ಚಿತ್ರರಂಗ ಪ್ರವೇಶಿಸಿದ್ದ ಜನಪ್ರಿಯ ಚಿತ್ರ ಕಥೆ ಬರಹಗಾರರು, ನಿರ್ಮಾಪಕ ಕೋಡಿ ರಾಮಕೃಷ್ಣ ಕನ್ನಡ, ತಮಿಳು, ಮಲಯಾಳಂ, ಹಿಂದಿ, ತೆಲುಗು ಭಾಷೆಗಳಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಕನ್ನಡದ ನಾಗರಹಾವು, ಮಂಗಮ್ಮಗರಿ, ಅಂಕುಶಂ, ಅಮ್ಮೋರು, ಅರುಂಧತಿ ಇವರ ನಿರ್ದೇಶನ ಕೆಲ ಸೂಪರ್ ಹಿಟ್ ಸಿನಿಮಾಗಳಾಗಿವೆ.

Trending News