ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 53 ನೇ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು 'ಮನ್ ಕಿ ಬಾತ್'ನ ಕಡೆಯ ಆವೃತ್ತಿಯಾಗಿರಲಿದ್ದು, ಜನತೆಯಲ್ಲಿ ಭಾರೀ ಕುತೂಹಲ ಮೂಡಿಸಿದೆ.
2019ರ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಗೂ ಮುನ್ನ ಇಂದು ಪ್ರಸಾರವಾಗಲಿರುವ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ, ಪುಲ್ವಾಮಾ ದಾಳಿ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.
2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ 'ಮನ್ ಕೀ ಬಾತ್' ಕಾರ್ಯಕ್ರಮ ರೇಡಿಯೋ ಮೂಲಕ ಈವರೆಗೆ ಸಾರ್ವಜನಿಕರನ್ನು ತಲುಪಿ ಜನಮನಗಳಿಸಿತ್ತು. ಕೇಂದ್ರ ಸರ್ಕಾರದ ಯೋಜನೆಗಳು, ಸರ್ಕಾರದ ಸಾಧನೆಗಳನ್ನು ಖುದ್ದು ಪ್ರಧಾನಿಗಳೇ ಈ ಕಾರ್ಯಕ್ರಮ ಮೂಲಕ ಜನರಿಗೆ ತಲುಪಿಸುತ್ತಿದ್ದರು. ಈವರೆಗೂ ಪ್ರಧಾನಿಯವರು 52 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ಮಾತನ್ನಾಡಿದ್ದಾರೆ. ಇಂದು 53 ನೇ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಮಾತನಾಡಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.