Shani Shadashtak:ಎಚ್ಚರ! ಶನಿ ಹಾಗೂ ಮಂಗಳರಿಂದ ಅಪಾಯಕಾರಿ ಷಡಾಷ್ಟಕ ಯೋಗ ನಿರ್ಮಾಣ, ಈ ರಾಶಿಯವರಿಗೆ ಧನಹಾನಿ ಸಾಧ್ಯತೆ!

Shani Shadashtak Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೇ 10, 2023 ರಂದು ಶನಿ ಷಡಾಷ್ಟಕ ಯೋಗ ರೂಪುಗೊಳ್ಳುತ್ತಲಿದೆ. ಇದರಿಂದ ಒಟ್ಟು 2 ತಿಂಗಳ ಅವಧಿಗೆ ಮೂರು ರಾಶಿಗಳ ಜನರು ತುಂಬಾ ಎಚ್ಚರದಿಂದ ಇರಬೇಕಾದ ಕಾಲ ಬರಲಿದೆ. ಏಕೆಂದರೆ ಈ ಅವಧಿಯಲ್ಲಿ ಮೂರು ರಾಶಿಗಳ ಜನರಿಗೆ ನಕಾರಾತ್ಮಕ ಫಲಿತಾಂಶಗಳು ಸಿಗುವ ಸಾಧ್ಯತೆ ಇದೆ. 
 

Shani Shadashtak Yog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹ-ನಕ್ಷತ್ರಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ-ಅಶುಭ ಯೋಗಗಳನ್ನು ನಿರ್ಮಿಸುತ್ತಲೇ ಇರುತ್ತವೆ. ಈ ಶುಭ ಅಶುಭ ಯೋಗಗಳು ಮಾನವ ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ತನ್ನ ಪ್ರಭಾವವನ್ನು ಬೀರುತ್ತವೆ. ಶೀಘ್ರದಲ್ಲಿಯೇ ಜೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಅಪಾಯಕಾರಿ ಯೋಗ ಎಂದೇ ಪರಿಗಣಿಸಲಾಗುವ ಷಡಾಷ್ಟಕ ಯೋಗ ರೂಪುಗೊಳ್ಳುತ್ತಲಿದೆ. ಯಾವ ವ್ಯಕ್ತಿಯ ಗೋಚರ ಜಾತಕದಲ್ಲಿ ಈ ಯೋಗ ಇರುತ್ತದೆಯೋ ಆ ವ್ಯಕ್ತಿ ತನ್ನ ಇಡೀ ಜೀವನವನ್ನೇ ಕಷ್ಟದಲ್ಲಿ ಕಳೆಯಬೇಕಾಗುತ್ತದೆ. ಮೇ 10, 2023 ರಂದು ನವಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳ ಕರ್ಕ ರಾಶಿಗೆ ಪ್ರವೇಶಿಸಲಿದ್ದಾನೆ ಹಾಗೂ ಆತ ಜುಲೈ 1,2023 ರವರೆಗೆ ಅಲ್ಲಿಯೇ ವಿರಾಜಮಾನನಾಗಿರಲಿದ್ದಾನೆ. ಈ ಅವಧಿಯಲ್ಲಿ ಶನಿಯ ಷಡಾಷ್ಟಕ ಯೋಗ ಕೂಡ ರೂಪುಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಧನಹಾನಿ ಸಂಭವಿಸುವ ಸಾಧ್ಯತೆ ಇದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-Neech Bhang Rajyog: ಶೀಘ್ರದಲ್ಲೇ ನಿರ್ಮಾಣಗೊಳ್ಳುತ್ತಿದೆ ನೀಚಭಂಗ್ ರಾಜಯೋಗ, 3 ರಾಶಿಗಳ ಜನರಿಗೆ ಭಾರಿ ಧನಪ್ರಾಪ್ತಿಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /3

ಮಿಥುನ ರಾಶಿ: ಶನಿಯ ಈ ಷಡಾಷ್ಟಕ ಯೋಗ ಮಿಥುನ ರಾಶಿಯ ಜನರ ಪಾಲಿಗೆ ಅತ್ಯಂತ ಪ್ರತಿಕೂಲ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ದ್ವಿತೀಯ ಭಾವದಲ್ಲಿ ಮಂಗಳನ ಗೋಚರ ನೆರವೇರುತ್ತಿದ್ದು, ಇದರಿಂದ ನಿಮಗೆ ಧನಹಾನಿ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಜಗಳ ಅಥವಾ ವ್ಯಾಜ್ಯಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಮಾತಿನ ಮೇಲೆ ನಿಯಂತ್ರಣವಿರಲಿ. ಇದಲ್ಲದೆ ಹಣಕಾಸಿನ ಹೂಡಿಕೆಗೂ ಸಂಬಂಧಿಸಿದಂತೆ ಎಚ್ಚರಿಕೆವಹಿಸುವ ಅವಶ್ಯಕತೆ ಇದೆ. ಕುಟುಂಬದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ. ಆಸ್ತಿ-ಪಾಸ್ತಿಗೆ ಸಂಬಂಧಿಸಿಯಂತೆ ವಿವಾದ ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಕಾರ್ಯಸ್ಥಳದಲ್ಲಿ ನಿಮಗೆ ಸಂಕಷ್ಟಗಳು ಎದುರಾಗುವ ಸಾಧ್ಯತೆ ಇದೆ.   

2 /3

ಸಿಂಹ ರಾಶಿ: ಶನಿಯ ಈ ಷಡಾಷ್ಟಕ ಯೋಗ ನಿಮ್ಮ ಪಾಲಿಗೆ ಹಾನಿಕಾರಕ ಸಾಬೀಟಾಗುವ ಸಾಧ್ಯತೆ ಇದೆ. ಏಕೆಂದರೆ ಮಂಗಳ ನಿಮ್ಮ ಗೋಚರ ಜಾತಕದ ದ್ವಾದಶ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕೋರ್ಟ್-ಕಚೇರಿ ಕೆಲಸಗಳಲ್ಲಿ ನಿಮಗೆ ಅಡೆತಡೆಗಳು ಎದುರಾಗುವ ಸಾಧ್ಯತೆ ಇದೆ. ಕಾರಣವಿಲ್ಲದೆ ಅಪಕೀರ್ತಿ ಎದುರಾಗುವ ಸಾಧ್ಯತೆ ಇದೆ. ಅನಾವಶ್ಯಕ ಯಾತ್ರೆಗಳ ಸಾಧ್ಯತೆ ಇದ್ದು, ಆದಷ್ಟು ತಪ್ಪಿಸಲು ಯತ್ನಿಸಿ. ಈ ಅವಧಿಯಲ್ಲಿ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದ್ದು, ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ. ಇದಲ್ಲದೆ ನೀವು ನಿಮ್ಮ ಆರೋಗ್ಯದ ಬಗ್ಗೆಯೂ ಕೂಡ ಕಾಳಜಿವಹಿಸಿ.   

3 /3

ಧನು ರಾಶಿ: ಷಡಾಷ್ಟಕ ಯೋಗ ನಿಮ್ಮ ಪಾಲಿಗೂ ಕೂಡ ಅನಾನುಕೂಲಕ ಸಾಬೀತಾಗುವ ಸಾಧ್ಯತೆ ಇದೆ. ಮಂಗಳ ನಿಮ್ಮ ಗೋಚರ ಜಾತಕದ ಅಷ್ಟಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಗುಪ್ತ ಶತ್ರುಗಳಿಂದ ಸಾಕಷ್ಟು ಎಚ್ಚರಿಕೆವಹಿಸಿ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ತಲೆದೂರುವ ಸಾಧ್ಯತೆ ಇದೆ. ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಇದ್ದರೆ ವೈದ್ಯರ ಸಂಪರ್ಕದಲ್ಲಿರಿ. ವಾಹನ ನಡೆಸುವಾಗ ಎಚ್ಚರಿಕೆವಹಿಸಿ, ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಇನ್ನೊಂದೆಡೆ ಬಾಳಸಂಗಾತಿಯ ಜೊತೆಗೆ ವಿರಸ ಉಂಟಾಗುವ ಸಾಧ್ಯತೆ ಇದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)