ಬೆಂಗಳೂರು: ಮುಸ್ಲಿಂರಿಗೆ ನೀಡಲಾಗಿದ್ದ ಶೇ.4ರಷ್ಟು ಒಬಿಸಿ ಮೀಸಲಾತಿ ರದ್ದುಪಡಿಸಿರುವ ಸರ್ಕಾರದ ಆದೇಶದ ಕುರಿತ ರಾಜಕೀಯ ಹೇಳಿಕೆಗಳನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ನ್ಯಾಯಾಲಯದ ವಿಚಾರಣೆಯಲ್ಲಿರುವ ಪ್ರಕರಣ ಕುರಿತು ಮಾತನಾಡುವಾಗ ಜಾಗ್ರತೆ ವಹಿಸಬೇಕೆಂದು ಖಡಕ್ ಎಚ್ಚರಿಕೆ ನೀಡಿದೆ. ಇದೇ ವಿಚಾರವಾಗಿ ಮಂಗಳವಾರ ಸರಣಿ ಟ್ವೀಟ್ ಮಾಡರುವ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಜ್ಯ ಬಿಜೆಪಿ ಸರ್ಕಾರದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶದ ಬಗ್ಗೆ ನೀಡಿರುವ ಬೇಜವಾಬ್ದಾರಿ ಹೇಳಿಕೆಗಾಗಿ ಸುಪ್ರೀಂಕೋರ್ಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಪರಾಕಿ ನೀಡಿದೆ. "ಪ್ರಕರಣ ವಿಚಾರಣೆಯಲ್ಲಿರುವಾಗ ನ್ಯಾಯಾಲಯದ ಪಾವಿತ್ರ್ಯತೆಯನ್ನು ಪಾಲಿಸಬೇಕಾಗುತ್ತದೆ, ಈ ರೀತಿಯ ರಾಜಕೀಯ ಹೇಳಿಕೆ ಸಲ್ಲದು" ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹೇಳಿರುವುದು ಸರಿಯಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಸಾಲಿಸಿಟರ್ ಜನರಲ್ ಇಲ್ಲವೇ ವಕೀಲರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿ, ಮೂರನೇ ವ್ಯಕ್ತಿ ಇದಕ್ಕೆ ಯಾಕೆ ಪ್ರತಿಕ್ರಿಯಿಸಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಕೇಳಿದ್ದಾರೆ.
ಕೇಂದ್ರ ಗೃಹ ಸಚಿವರು ಇನ್ನು ಮುಂದೆಯಾದರೂ ಎಚ್ಚರಿಕೆಯಿಂದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿದ್ದೇನೆ. 2/3— Siddaramaiah (@siddaramaiah) May 9, 2023
ಇದನ್ನೂ ಓದಿ: ಮತಗಟ್ಟೆಯತ್ತ ಸಿಬ್ಬಂದಿ: ಕಾಡಂಚಿನ ಗ್ರಾಮಗಳಿಗೆ ಜೀಪ್ ವ್ಯವಸ್ಥೆ
‘ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಸಾಲಿಸಿಟರ್ ಜನರಲ್ ಇಲ್ಲವೇ ವಕೀಲರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿ, 3ನೇ ವ್ಯಕ್ತಿ ಇದಕ್ಕೆ ಯಾಕೆ ಪ್ರತಿಕ್ರಿಯಿಸಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಕೇಳಿದ್ದಾರೆ. ಕೇಂದ್ರ ಗೃಹ ಸಚಿವರು ಇನ್ನು ಮುಂದೆಯಾದರೂ ಎಚ್ಚರಿಕೆಯಿಂದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿದ್ದೇನೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ರಾಜ್ಯ @BJP4Karnataka ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲ. 3/3
— Siddaramaiah (@siddaramaiah) May 9, 2023
‘ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲ’ವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಇದನ್ನೂ ಓದಿ: Bull Fight Video: ಗದಗದಲ್ಲಿ ಸಿದ್ದರಾಮಯ್ಯ vs ಬೊಮ್ಮಾಯಿ ಗೂಳಿ ಕಾಳಗ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.