/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಪಕ್ಷವು ಎಲ್ಲಾ ಸಮಾನ ಮನಸ್ಸಿನ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ.ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆ ಒಂದೆರೆಡು ದಿನದಲ್ಲಿ ರೂಪು ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mudigere Assembly Election Result 2023: ನಯನ ಮೋಟಮ್ಮ ʼಕೈʼ ಹಿಡಿದ ಮೂಡಿಗೆರೆ ಮತದಾರರು

ಮುಖ್ಯಮಂತ್ರಿ ಯಾರಾಗಬಹುದು ಎಂದು ಚರ್ಚಿಸಲು ಕಾಂಗ್ರೆಸ್ ಇಂದು ತನ್ನ ಶಾಸಕರ ಸಭೆ ಕರೆದಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಮುಖ್ಯಮಂತ್ರಿ ಆಯ್ಕೆಯನ್ನು ನಿರ್ಧರಿಸಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಡುವ ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಇಂದು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಆದರೆ ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬಬಾರಿಯಾ ಮತ್ತು ಜಿತೇಂದ್ರ ಸಿಂಗ್ ಅಲ್ವಾರ್ ಕರ್ನಾಟಕ ಸಿಎಲ್‌ಪಿ ಸಭೆಯ ವೀಕ್ಷಕರಾಗಿದ್ದಾರೆ.

ಇದನ್ನೂ ಓದಿ: Chikmagalur Assembly Constituency: ಎಚ್ ಡಿ ತಮ್ಮಯ್ಯಗೆ ಗೆಲುವು.. ಸಿಟಿ ರವಿಗೆ ಹೀನಾಯ ಸೋಲು!

ಈಗಾಗಲೇ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ.ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಮತ್ತು ಸಹೋದರ, ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರೊಂದಿಗೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ 120 ಕಿಮೀ ದೂರದಲ್ಲಿರುವ ದೇವಸ್ಥಾನಕ್ಕೆ ತೆರಳಿದ್ದರು.

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ಬೆಂಬಲಿಗರು ಅವರ ಮನೆಯ ಹೊರಗೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಪೋಸ್ಟರ್ ಹಾಕಿದ್ದಾರೆ.ಇನ್ನೊಂದೆಡೆಗೆ ಶಿವಕುಮಾರ್ ಅವರ ಮನೆಯ ಹೊರಗೆ ಕರ್ನಾಟಕದ ನೂತನ ಮುಖ್ಯಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎನ್ನುವ  ಪೋಸ್ಟರ್‌ಗಳು  ಕಾಣಿಸಿಕೊಂಡಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Section: 
English Title: 
The new Karnataka Chief Minister and the cabinet will take oath on Thursday,
News Source: 
Home Title: 

ಗುರುವಾರದಂದು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನ !

ಗುರುವಾರದಂದು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನ !
Yes
Is Blog?: 
No
Tags: 
Facebook Instant Article: 
Yes
Highlights: 

ಮುಖ್ಯಮಂತ್ರಿ ಯಾರಾಗಬಹುದು ಎಂದು ಚರ್ಚಿಸಲು ಕಾಂಗ್ರೆಸ್ ಇಂದು ತನ್ನ ಶಾಸಕರ ಸಭೆ ಕರೆದಿದೆ.

ಇಂದು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ,

ಆದರೆ ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Mobile Title: 
ಗುರುವಾರದಂದು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣವಚನ !
Zee Kannada News Desk
Publish Later: 
No
Publish At: 
Sunday, May 14, 2023 - 18:53
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
223