ಬೆಂಗಳೂರು: ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿದೆ.
ಈ ಹಿನ್ನೆಲೆಯಲ್ಲಿ ಈಗ ಕೆಪಿಸಿಸಿ ವಕ್ತಾರ ಗಂಗಾಧರ್ ದೊಡ್ಡವಾಡ ಲಿಂಗಾಯತರಿಗೆ ಡಿಸಿಎಂ ಪಟ್ಟವನ್ನು ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚು ಲಿಂಗಾಯತ ಅಭ್ಯರ್ಥಿಗಳು ಚುನಾಯಿತರಾಗಿದ್ದು ಕ್ಷೇತ್ರದಿಂದ ಹೊರಗಿದ್ದರು ಕೂಡಾ ಧಾರವಾಡ ಗ್ರಾಮಾಂತರ ವಿಧಾನ ಸಭಾದಿಂದ ಆಯ್ಕೆಯಾದ ವಿನಯ ಕುಲಕರ್ಣಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಈ ಇಬ್ಬರು ಕಿಲಾಡಿಗಳ ದರ್ಬಾರ್! 10 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುವುದು ಖಚಿತ ಅನ್ಸುತ್ತೆ!
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯು ಲಿಂಗಾಯತ ಸಮುದಾಯವನ್ನು ಕಡೆಗಣಿಸಿದ್ದೇ ದೊಡ್ಡ ಸೋಲಿಗೆ ಕಾರಣವಾಯಿತು.ಆದ್ದರಿಂದ ಕಾಂಗ್ರೆಸ್ ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ನೀಡುವುದರ ಜೊತೆಗೆ ಯೋಗ್ಯ ಹುದ್ದೆ ನೀಡಬೇಕು. ಕೇವಲ ಮಗಿಗೆ ತುಪ್ಪ ಒರೆಸುವ ಕೆಲಸಕ್ಕೆ ಮುಂದಾಗಬಾರದು.ಈ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳನ್ನ ನೀಡಿದ್ದು, ಅದಕ್ಕೆ ಸೂಕ್ತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ಜೊತೆಗೆ ಉನ್ನತ ಹುದ್ದೆಗಳಾದ ಉಪ ಮುಖ್ಯಮಂತ್ರಿ ಸ್ಥಾನ ಒಬ್ಬರಿಗೆ ಕೊಡಲೇಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Karnataka New CM Oath Taking: ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ?
ಇದೆ ವೇಳೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಮೂರು ಸಲ ಆಯ್ಕೆಯಾಗಿರುವ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೂ ಸಹ ಸಚಿವ ಸಂಪುಟದದಲ್ಲಿ ಸ್ಥಾನ ನೀಡಬೇಕು.ಅವರು 1300 ಕೋಟಿಯಷ್ಟು ಅನುದಾನವನ್ನು ಕಳೆದ ಅವಧಿಯಲ್ಲಿ ತಂದು ಸಾಕಷ್ಟು ಅಭಿವೃದ್ಧಿ ಮಾಡಿ ಜನರ ಪ್ರೀತಿಗೆ ಮೆಚ್ಚುಗೆ ಪಾತ್ರರಾಗಿದ್ದಾರೆ ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ