ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಉಮೇಶ್ ಜಾಧವ್

ಇತ್ತೀಚಿಗಷ್ಟೇ ತಮ್ಮ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಡಾ. ಉಮೇಶ್ ಜಾಧವ್ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್‌ ಜಾಧವ್‌ ರವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿಎಸ್‌.ಯಡಿಯೂರಪ್ಪನವರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ವೇಳೆ ವಿಧಾನ ಸಭೆ ವಿರೋಧ ಪಕ್ಷ ಉಪ ನಾಯಕರಾದ ಶ್ರೀ ಗೋವಿಂದ್‌ ಕಾರಜೋಳ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್‌ ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು.

Last Updated : Mar 6, 2019, 06:25 PM IST
 ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಉಮೇಶ್ ಜಾಧವ್  title=
Photo courtesy: Facebook

ಬೆಂಗಳೂರು: ಇತ್ತೀಚಿಗಷ್ಟೇ ತಮ್ಮ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಡಾ. ಉಮೇಶ್ ಜಾಧವ್ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್‌ ಜಾಧವ್‌ ರವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿಎಸ್‌.ಯಡಿಯೂರಪ್ಪನವರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ವೇಳೆ ವಿಧಾನ ಸಭೆ ವಿರೋಧ ಪಕ್ಷ ಉಪ ನಾಯಕರಾದ ಶ್ರೀ ಗೋವಿಂದ್‌ ಕಾರಜೋಳ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್‌ ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು.

.

ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು "ನನಗೆ ಬಿಜೆಪಿಯನ್ನು ಸೇರುತ್ತಿರುವುದಕ್ಕೆ ಹೆಮ್ಮೆ ಮತ್ತು ಸಂತೋಷವಾಗುತ್ತಿದೆ ಎಂದು ಹೇಳಿದರು.ಈಗ ಅವರನ್ನು ಮುಂಬರುವ ಲೋಕಸಭೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಕಣಕ್ಕಿಳಿಸುವ ಪ್ರಯತ್ನವನ್ನು ಬಿಜೆಪಿ ಮಾಡಲಿದೆ ಎನ್ನಲಾಗಿದೆ.ಕಲ್ಬುರ್ಗಿಯಲ್ಲಿ ಲಂಬಾಣಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕಲ್ಬುರ್ಗಿ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ತುದಿಗಾಲಲ್ಲಿ ನಿಂತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದ ಜಾಧವ್ ಇತ್ತೀಚಿಗಷ್ಟೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿಂದೆ ಸತತವಾಗಿ ಬಜೆಟ್ ಅಧಿವೇಶನ ಹಾಗೂ ಶಾಸಕಾಂಗದ ಸಭೆ ಹಾಜರಾಗುವ ಮೂಲಕ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದರು.ಆಗಿನಿಂದಲೂ ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಊಹಾಪೋಹವು ಕೂಡ ಹೆಚ್ಚಿತ್ತು.ಈಗ ಅದೆಲ್ಲದಕ್ಕೂ ತೆರೆ ಬಿದ್ದಿದೆ.

 

Trending News