Weather Update 22-05-2023: ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಜೆ ವೇಳೆಗೆ ಮನೆಗೆ ತೆರಳುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಂಗಳೂರಿನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ, ಟೆಕ್ಕಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಹಲವೆಡೆ ಇನ್ನೂ 3 ದಿನಗಳ ಕಾಲ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಮಳೆಯಾಗಲಿರುವ ಜಿಲ್ಲಾವಾರು ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನ ಮಳೆರಾಯ ಅಬ್ಬರಿದ್ದನು. ಇದೀಗ ಮತ್ತೆ ಕಾಲಿಟ್ಟಿದ್ದು, ಅನಾಹುತವನ್ನೇ ಸೃಷ್ಟಿಸಿದ್ದಾನೆ. ನಗರದಲ್ಲಿ ಇಂದು ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ.
ಕಳೆದ ದಿನ ಸಂಜೆ 4ರ ಸಮಯಕ್ಕೇ ಬೆಂಗಳೂರು ಕಗ್ಗತ್ತಲ ಕೂಪದಂತೆ ಕಾಣುತ್ತಿತ್ತು. ಮೋಡ ಕವಿದ ವಾತಾವರಣದಿಂದ ರಾಜ್ಯ ರಾಜಧಾನಿಯ ಜನರು ಭಯಗೊಂಡಿದ್ದು ಮಾತ್ರ ಸುಳ್ಳಲ್ಲ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸುರಿಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಮಳೆ ಬಿದ್ದರೂ ಸಹ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಇಂದಿನಿಂದ (ಮೇ 22) ಮಳೆಯ ತೀವ್ರತೆ ಹೆಚ್ಚಲಿದ್ದು, ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್’ಗೆ ಇಳಿಯುವ ಸಾಧ್ಯತೆಯಿದೆ.