ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಿಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವ್ರು ಮಾಡಲಿಲ್ಲ ಎಂದು ಬೊಮ್ಮಾಯಿ ಆರೋಪ ಮಾಡಿದರು.
ಇದನ್ನೂ ಓದಿ: Darshan Puttannaiah: ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರದ ಮೇಲುಕೋಟೆಯಲ್ಲಿ ಹೆಚ್ಚಾಯ್ತು ದ್ವೇಷದ ರಾಜಕೀಯ.!
ನಾವು ಬೆಂಗಳೂರಿನಲ್ಲಿ ಎಸ್ಡಿಆರ್ಎಫ್ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆ ಮರಗಳು ಬಿದ್ದಿವೆ
ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ.
ಇದನ್ನೂ ಓದಿ: DK Shivakumar : ನೊಣವಿನಕೆರೆ ಅಜ್ಜಯ್ಯನ ಮಠದತ್ತ ಡಿಕೆಶಿ ಪ್ರಯಾಣ; ಕೆಟ್ಟು ನಿಂತ ಎಸ್ಕಾಟ್ ವಾಹನ
ಮುಂದಿನ ಐದು ದಿನ ಹೀಗೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆಧ್ಯತೆಯಿಂದ ಸಿಎಂ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು ಕೆಲಸ ಮಾಡೋರು ಮಾಡ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ