ಲೋಕಸಭೆ ಚುನಾವಣೆ ಟಿಕೆಟ್‌ನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಘೋಷಿಸಿದ ಬಿಜೆಡಿ

ಬಿಜೆಡಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಹಿಳೆಯರಿಗೆ 33 ಶೇ. ಮೀಸಲಾತಿಯನ್ನು ಘೋಷಿಸಿದೆ. 

Last Updated : Mar 10, 2019, 03:34 PM IST
ಲೋಕಸಭೆ ಚುನಾವಣೆ ಟಿಕೆಟ್‌ನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಘೋಷಿಸಿದ ಬಿಜೆಡಿ title=
Photo Courtesy: ANI

ಭುವನೇಶ್ವರ್: ಬಿಜು ಜನತಾ ದಳ (ಬಿಜೆಡಿ) ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಹಿಳೆಯರಿಗೆ 33 ಶೇ. ಮೀಸಲಾತಿಯನ್ನು ಘೋಷಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಘೋಷಿಸಿದ ಮೊದಲ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 

ಭಾನುವಾರ ಒಡಿಶಾದ ಕೇಂದ್ರಪರಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಒಡಿಶಾ ಮುಖ್ಯಮಂತ್ರಿ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಈ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಕನಿಷ್ಠ 7 ರಿಂದ 8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವಯಂ ಸೇವಾ ಸಂಘ ಉದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, ಪ್ರಸಿದ್ಧ ಬಿಜು ಬಾಬು ಅವರ ಕರ್ಮಭೂಮಿಯಾದ ಕೇಂದ್ರಪರಾದಲ್ಲಿ ಮಹಿಳಾ ಮಿಸಲಾತಿ ವಿಚಾರ ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. 

ಲೋಕಸಭೆ ಚುನಾವಣೆ ಪ್ರಚಾರಕ್ಕೆ ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳೂ ಸಿದ್ಧವಾಗಿದ್ದು, ಚುನಾವಣಾ ಆಯೋಗವು ಇಂದು ಸಂಜೆ ಚುನಾವಣೆಯ ದಿನಾಂಕ ಘೋಷಿಸಲಿದೆ. 
 

Trending News