ಬೆಂಗಳೂರು : ಮಹಿಳಾ ಕೆಎಎಸ್ ಅಧಿಕಾರಿಗೆ ಸಹೋದರನೇ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧಿಕಾರಿ ಡಾ.ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಮಲಗಿದ್ದ ಬಾಲಕಿ ಮೇಲೆ ಬಟ್ಟೆ ಹಾಕಿ ಅಪಹರಣ ಎಂದು ಪೋಷಕರು ದೂರು: ಹುಡುಕಾಡಿ ಪೊಲೀಸರು ಸುಸ್ತು..!
ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ.ಮೈತ್ರಿ ವಾಸವಿದ್ದು, ಸಹೋದರ ಡಾ.ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು ಹೊಸದಾಗಿ ಬ್ಯುಸಿನೆಸ್ ಮಾಡುತ್ತಿದ್ದೇನೆ. ಹೀಗಾಗಿ ಎರಡು-ಮೂರು ಕೋಟಿ ಹಣ ಕೊಡು ಎಂದು ಕೇಳುತ್ತಿದ್ದರು ಎನ್ನಲಾಗಿದೆ. ಆದರೆ ಹಣ ನೀಡಲು ಮೈತ್ರಿ ನಿರಾಕರಿಸಿದ್ದರು.
ಇದನ್ನೂ ಓದಿ- Shocking News: ಪತ್ನಿ, ಪುತ್ರ-ಪುತ್ರಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!
ಮೇ 11ರಂದು ಕರ್ತವ್ಯ ಮುಗಿಸಿಕೊಂಡು ಮೈತ್ರಿಯವರು ಮನೆಗೆ ಬರುವ ಸಮಯಕ್ಕೆ ಸರಿಯಾಗಿ ಮನೆಗೆ ಬಂದಿದ್ದ ಸಂಜಯ್, ಮೈತ್ರಿಯವರ ಮೇಲೆ ಮಕ್ಕಳ ಮುಂದೆಯೇ ಹಲ್ಲೆ ಮಾಡಿದ್ದಾನೆ. ಅಲ್ಲದೇ ಹಣ ನೀಡದಿದ್ದಲ್ಲಿ ನೀನು ಮತ್ತು ಮೇಲೆ ಭಾನಾಮತಿ ಮಾಡಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ. ಸದ್ಯ ಡಾ.ಮೈತ್ರಿ ನೀಡಿರುವ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಡಾ.ಸಂಜಯ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.