ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಬಿಎಸ್​ಪಿ ಮೈತ್ರಿಯಿಲ್ಲ: ಮಾಯಾವತಿ

ಪತ್ರಿಕಾ ಪ್ರಕಟಣೆಯ ಪ್ರಕಾರ, ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ವು ಇತರ ರಾಜ್ಯಗಳಲ್ಲಿ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

Last Updated : Mar 12, 2019, 04:26 PM IST
ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಬಿಎಸ್​ಪಿ ಮೈತ್ರಿಯಿಲ್ಲ: ಮಾಯಾವತಿ title=
File Image

ನವದೆಹಲಿ: ಘಟಬಂಧನ್ ಕುರಿತು ನಡೆಯುತ್ತಿರುವ ಚರ್ಚೆ ಬಗ್ಗೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಬಿಎಸ್​ಪಿ ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಮಂಗಳವಾರ(ಮಾರ್ಚ್ 12)
ತಿಳಿಸಿದ್ದಾರೆ.

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಬಿಎಸ್​ಪಿಯ ಯಾವುದೇ ರೀತಿಯ ಒಪ್ಪಂದವಿಲ್ಲ ಎಂದು ಅವರು ತಿಳಿಸಿದರು.

ಈ ಕುರಿತು ಬಿಎಸ್​ಪಿಯಿಂದ ಪತ್ರಿಕಾ ಪ್ರಕಟಣೆಯೊಂದು ಬಿಡುಗಡೆಯಾಗಿದ್ದು, ಇದರ ಪ್ರಕಾರ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ವು ಇತರ ರಾಜ್ಯಗಳಲ್ಲಿ ಸಣ್ಣ ಪಕ್ಷಗಳ ಜೊತೆ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

ಕೆಲವು ಪಕ್ಷಗಳು ಬಿಎಸ್​ಪಿ ಜೊತೆ ಮೈತ್ರಿಗೆ ಉತ್ಸುಕರಾಗಿದ್ದಾರೆ ಎಂದು ತಿಳಿಸಿರುವ ಮಾಯಾವತಿ, ಕೇವಲ ಚುನಾವಣಾ ಲಾಭಕ್ಕಾಗಿ ಇದನ್ನು ಮಾಡಲಾರರು ಎಂದಿದ್ದಾರೆ. ಪರಿಸ್ಥಿತಿ ಬದಲಾಗಲು ದೀರ್ಘ ಸಮಯ ತೆಗೆದುಕೊಳ್ಳುವುದಿಲ್ಲ ಎಂದಿರುವ ಅವರು, ಬಿಎಸ್​ಪಿ ತನ್ನ ಕಾರ್ಯಕರ್ತರನ್ನು ಬಲಪಡಿಸುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದಿದ್ದಾರೆ.

Trending News