ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕನ ರಕ್ಷಣೆ

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ದಾಳಿಯಲ್ಲಿ ಸಿಕ್ಕಿರುವ ಬಾಲ ಕಾರ್ಮಿಕ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. 

Written by - Yashaswini V | Last Updated : May 30, 2023, 08:29 AM IST
  • 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು
  • 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕನ ರಕ್ಷಣೆ title=

ಹುಬ್ಬಳ್ಳಿ: ಬಾಲ ಕಾರ್ಮಿಕನನ್ನು ಗೃಹ ಕಾರ್ಮಿಕನಾಗಿ ಕೆಲಸಕ್ಕೆ ನೇಮಿಸಿಕೊಂಡಿರುವ ದೂರಿನನ್ವಯ ಮೇ.26 ರಂದು ಹುಬ್ಬಳ್ಳಿಯ ಲಿಂಗರಾಜನಗರ ವ್ಯಾಪ್ತಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ಮನೆಯ ಮೇಲೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಠಾತ್ ದಾಳಿ ನಡೆಸಿದರು.

ಈ ಸಮಯದಲ್ಲಿ ಮಗು ಕೆಲಸ ಮಾಡುತ್ತಿರುವುದು ಕಂಡು ಬಂದಿತು. ಇದು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಉಲ್ಲಂಘನೆಯಾಗಿದೆ. 

ಇದನ್ನೂ ಓದಿ- ವೃದ್ಧೆ ಹತ್ಯೆಗೈದು ಚಿನ್ನಾಭರಣ ದೋಚಿದ ಖದೀಮರು..!

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ದಾಳಿಯಲ್ಲಿ ಸಿಕ್ಕಿರುವ ಬಾಲ ಕಾರ್ಮಿಕ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. 

ಇದನ್ನೂ ಓದಿ- ಮನೆ ಬಾಡಿಗೆ ಕೇಳೋ ನೆಪ : ಓನರ್‌ ತಲೆ ಹೊಡೆದು ಚಿನ್ನದ ಸರ ಕದ್ದ ಖತರ್ನಾಕ್‌ ಲೇಡಿಸ್‌

ಈ ಕಾರ್ಯಾಚರಣೆಯನ್ನು ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದ ಮೇರೆಗೆ ಕೈಗೊಳ್ಳಲಾಗಿದೆ ಮತ್ತು ಈ ಕಾರ್ಯಾಚರಣೇಯ ನೇತೃತ್ವವನ್ನು ಮಾರಿಕಾಂಬಾ ಹುಲಕೋಟಿ ಕಾರ್ಮಿಕ ಅಧಿಕಾರಿ ಉಪ ವಿಭಾಗ-2, ಹುಬ್ಬಳ್ಳಿ ವಹಿಸಿಕೊಂಡಿದ್ದರು. ಈ ಪ್ರಕರಣವು ಅಶೋಕ ಓಡೆಯರ ಹಿರಿಯ ಕಾರ್ಮಿಕ ನಿರೀಕ್ಷಕರು 3ನೇ ವೃತ್ತ, ಹುಬ್ಬಳ್ಳಿ ಇವರ ಕಾರ್ಯವ್ಯಾಪ್ತಿಗೆ ಒಳಪಡುವುದರಿಂದ ಕೆಲಸಕ್ಕೆ ನೇಮಿಸಿಕೊಂಡ ಮನೆಯ ಮಾಲೀಕರ ವಿರುದ್ಧ ಪ್ರಕರಣವನ್ನು ದಾಖಲಿಸಲು ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News