Rishab Pant Health Update: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಂತರ ಟೀಮ್ ಇಂಡಿಯಾ ಸೆಪ್ಟೆಂಬರ್ ನಲ್ಲಿ ಏಷ್ಯಾ ಕಪ್ ಮತ್ತು ಅಕ್ಟೋಬರ್-ನವೆಂಬರ್ ನಲ್ಲಿ ODI ವಿಶ್ವಕಪ್ ಅನ್ನು ಆಡಲಿದೆ. ಈ ಮಧ್ಯೆ, ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮರಳುವಿಕೆ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. 30 ಡಿಸೆಂಬರ್ 2022 ರಂದು ಕಾರು ಅಪಘಾತದಲ್ಲಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ: ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳ ಕೆಲವು ಪ್ರಸಿದ್ಧ ದೇವಾಲಯಗಳ ಪಟ್ಟಿ ಇಲ್ಲಿದೆ ನೋಡಿ
ಟೀಂ ಇಂಡಿಯಾಗೆ ಸಂತಸದ ಸುದ್ದಿ!
ರಿಷಬ್ ಪಂತ್ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದು ಟೀಂ ಇಂಡಿಯಾಗೆ ದೊಡ್ಡ ಸುದ್ದಿ ಎಂದೇ ಹೇಳಬಹುದು. ಆದರೆ ಅವರಿಗೆ ಅನೇಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂಬೆಲ್ಲಾ ವದಂತಿಗಳು ಹರಿದಾಡತೊಡಗಿದವು, ಆದರೆ ಬಿಸಿಸಿಐ ಮೂಲವೊಂದು ಮಾಧ್ಯಮದ ಜೊತೆ ಮಾತನಾಡುತ್ತಾ ಈ ಎಲ್ಲಾ ವಿಷಯಗಳನ್ನು ಅಲ್ಲಗಳೆದಿದೆ. “ವದಂತಿಗಳು ಎಲ್ಲೆಡೆ ಹರಿದಾಡುತ್ತಿರುವಂತೆ ಪಂತ್ ಅವರಿಗೆ ಹೆಚ್ಚಿನ ಶಸ್ತ್ರಚಿಕಿತ್ಸೆಗಳು ನಡೆದಿಲ್ಲ. ಪ್ರತಿ ಎರಡು ವಾರಗಳಿಗೊಮ್ಮೆ ಅವರನ್ನು ಪರೀಕ್ಷಿಸಲಾಗುತ್ತದೆ. ಅವರು ನಿರೀಕ್ಷೆಗಿಂತ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದರರ್ಥ ಸಮಯಕ್ಕಿಂತ ಮುಂಚಿತವಾಗಿ ಪುನರಾಗಮನವನ್ನು ಮಾಡಬಹುದು” ಎಂದರ್ಥ.
ಐಪಿಎಲ್ 2023ರ ನಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನ ಅಂತಿಮ ಪಂದ್ಯವನ್ನು ಆಡಲು ಟೀಮ್ ಇಂಡಿಯಾ ಇಂಗ್ಲೆಂಡ್ ಗೆ ತಲುಪಿದೆ. ಈ ಬಿಗ್ ಮ್ಯಾಚ್ ನಲ್ಲೂ ಟೀಂ ಇಂಡಿಯಾ ರಿಷಬ್ ಪಂತ್ ಅವರನ್ನು ಮಿಸ್ ಮಾಡಿಕೊಳ್ಳಲಿದೆ.
ಇತ್ತೀಚಿಗೆ ಐಪಿಎಲ್ ಮ್ಯಾಚ್ ಕಾಣಿಸಿಕೊಂಡಿದ್ದ ರಿಷಬ್!
ರಿಷಭ್ ಪಂತ್ ಇತ್ತೀಚೆಗೆ ಐಪಿಎಲ್ 2023 ರ ಸಮಯದಲ್ಲಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನ ಕೆಲವು ಪಂದ್ಯಗಳನ್ನು ವೀಕ್ಷಿಸಲು ಆಗಮಿಸಿದ್ದರು. ಪಂತ್ ಬಗ್ಗೆ ಬಿಸಿಸಿಐ ಮೂಲಗಳು ಅವರು ಈಗ ಮೊದಲಿಗಿಂತ ಉತ್ತಮವಾಗಿ ಕಾಣುತ್ತಿದ್ದಾರೆ ಎಂದು ಹೇಳಿತ್ತು.
ಇದನ್ನೂ ಓದಿ: Ambareesh birthday: ಪ್ರೀತಿಯ 'ಅಂಬಿ' ಅಣ್ಣನಿಗೆ ಪ್ರೀತಿಯಿಂದ ಬರ್ತ್ ಡೇ ವಿಶ್ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್..!
30 ಡಿಸೆಂಬರ್ 2022 ರಂದು ಸಂಭವಿಸಿದ ಅಪಘಾತದಲ್ಲಿ ರಿಷಬ್ ಪ್ರಾಣ ಸ್ವಲ್ಪದರಲ್ಲೇ ಬಚಾವ್ ಆಗಿತ್ತು. ಪಂತ್ ಅವರ ಶಿಶ್ನಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪಂತ್ ವಿಕೆಟ್ ಕೀಪಿಂಗ್ ಮಾಡಲು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆರಂಭದಲ್ಲಿ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕೆ ಇಳಿಯಬಹುದು ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ