The Kerala Story OTT Release: ಲವ್ ಜಿಹಾದ್ ಹಿನ್ನೆಲೆಯಲ್ಲಿ ತಯಾರಾದ 'ದಿ ಕೇರಳ ಸ್ಟೋರಿ' ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ. ಇದೀಗ ಈ ಚಿತ್ರವು ಶೀಘ್ರದಲ್ಲೇ OTT ನಲ್ಲಿ ಬಿಡುಗಡೆಯಾಗಲಿದೆ. ಈ ಸುದ್ದಿಯಿಂದ ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ. ವಿಶೇಷವೆಂದರೆ ಈ ಚಿತ್ರ ಮೇ 5 ರಂದು ಬಿಡುಗಡೆಯಾಗಿದ್ದು ಅಂದಿನಿಂದ ಇಲ್ಲಿಯವರೆಗೆ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ 200 ಕೋಟಿ ಗಡಿ ದಾಟಿದೆ.
ವರದಿಗಳ ಪ್ರಕಾರ, 'ದಿ ಕೇರಳ ಸ್ಟೋರಿ' ಚಿತ್ರದ OTT ಹಕ್ಕುಗಳನ್ನು ZEE 5 ಖರೀದಿಸಿದೆ. ಶೀಘ್ರದಲ್ಲೇ ZEE 5 ನಲ್ಲಿ ಸಿನಿಮಾ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಮತ್ತು ಚಿತ್ರದ ನಿರ್ಮಾಪಕರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಇದು ಸಂಭವಿಸಿದಲ್ಲಿ, ಥಿಯೇಟರ್ನಲ್ಲಿ ಹಣ ಗಳಿಸಿದ ನಂತರ, ಈ ಚಿತ್ರವು OTT ಯಲ್ಲೂ ಉತ್ತಮ ಗಳಿಕೆ ಮಾಡುವ ನಿರೀಕ್ಷೆ ದುಪ್ಪಟ್ಟಾಗಿದೆ.
ಇದನ್ನೂ ಓದಿ: ಟರ್ಕಿಯಲ್ಲಿ ಸಮಂತಾ ಜೊತೆ ವಿಜಯ್ ದೇವರಕೊಂಡ.. ಬಿಯರ್ ಕುಡಿದು ಚಿಲ್ ಮಾಡಿದ ಫೋಟೋ ವೈರಲ್!
'ದಿ ಕೇರಳ ಸ್ಟೋರಿ' ಚಿತ್ರ ಬಿಡುಗಡೆಗೂ ಮುನ್ನ ಮತ್ತು ನಂತರ ನಿರಂತರ ಚರ್ಚೆಯಲ್ಲಿದೆ. ಈ ಚಿತ್ರ ಈಗಾಗಲೇ 200 ಕೋಟಿ ಗಡಿ ದಾಟಿದೆ. ಇಂತಹ ಪರಿಸ್ಥಿತಿಯಲ್ಲಿ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾದ ತಕ್ಷಣ ಇನ್ನಷ್ಟು ಗಳಿಕೆ ಮಾಡಬಹುದು ಎಂಬ ನಿರೀಕ್ಷೆಯಿದೆ. ಮೂವರು ಹುಡುಗಿಯರ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಶಾಲಿನಿ ಉನ್ನಿಕೃಷ್ಣನ್ ಅವರನ್ನು ಹೇಗೆ ಫಾತಿಮಾ ಮಾಡಲಾಯಿತು ಮತ್ತು ಆಕೆಯನ್ನು ಹೇಗೆ ಬ್ರೈನ್ ವಾಶ್ ಮಾಡಿ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಸೆಳೆಯಯಲಾಯಿತು ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.
ಈ ಚಿತ್ರ ನಿರಂತರವಾಗಿ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಈ ಚಿತ್ರ ಕೂಡ ಹಲವು ರಾಜ್ಯಗಳಲ್ಲಿ ಬಿಡುಗಡೆಯಾಗಿರಲಿಲ್ಲ. ಈ ಚಿತ್ರದಲ್ಲಿ ಅದಾ ಶರ್ಮಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶಿಸಿದ್ದಾರೆ ಮತ್ತು ವಿಪುಲ್ ಅಮೃತಶಾ ಲಾಲ್ ನಿರ್ಮಿಸಿದ್ದಾರೆ.
ಇದನ್ನೂ ಓದಿ: Bhairati Rangal: ಭೈರತಿ ರಣಗಲ್ನಲ್ಲಿ ಶಿವಣ್ಣಗೆ ಹೀರೋಯಿನ್ ಯಾರು..!?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.