ಬೆಂಗಳೂರು: ಹಾಲಿ ಸಂಸದರಿರುವ ತುಮಕೂರು ಕ್ಷೇತ್ರವನ್ನು ವಾಪಾಸ್ ನೀಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಸ್ಕ್ರೀನಿಂಗ್ ಕಮಿಟಿಯಲ್ಲಿ ನಿರ್ಧಾರ ಮಾಡಿದ್ದೆವು. ಆದರೆ ಬಳಿಕ ದೇವೇಗೌಡ ಅವರು ರಾಹುಲ್ ಅವರೊಂದಿಗೆ ಮತ್ತೊಂದು ಸುತ್ತು ಮಾತನಾಡಿ ತುಮಕೂರನನ್ನು ಜೆಡಿಎಸ್ ಪಡೆದುಕೊಂಡಿದ್ದಾರೆ.
ನಮ್ಮ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಿದೆನು. pic.twitter.com/pLjARyCeJJ
— Dr. G Parameshwara (@DrParameshwara) March 15, 2019
ಹೆಚ್.ಡಿ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದಾದರೆ ಸ್ವಾಗತಾರ್ಹ. ದೇವೇಗೌಡರೇ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನಾವೂ ಸಹ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಇಲ್ಲವಾದರೆ ನಮ್ಮ ಹಾಲಿ ಸಂಸದರಿಗೇ ಕ್ಷೇತ್ರ ಬಿಟ್ಟುಕೊಡುವಂತೆ ದೇವೇಗೌಡರಲ್ಲಿಯೂ ಮನವಿ ಮಾಡಿದ್ದೇನೆ. ಅಗತ್ಯ ಬಿದ್ದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವೆ. ತುಮಕೂರು ಕ್ಷೇತ್ರ ವಾಪಾಸ್ ಸಿಗುವ ಭರವಸೆ ಇದೆ ಎಂದು ಪರಮೇಶ್ವರ ತಿಳಿಸಿದ್ದಾರೆ.