ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ.
5 ಲಕ್ಷ ಮೌಲ್ಯದ ವಿಮೆ ಮಾಡಿಸ ಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ನ್ನು ಪ್ರಾಧಿಕಾರ ಪಾವತಿಸಲಿದೆ.
ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್ಷದ ಹೆಣ್ಣಾನೆಯ ಆರೋಗ್ಯ ಆರೋಗ್ಯ ತಪಾಸಣೆ ಮಾಡಿಸಿದರು. ಪಶುವೈದ್ಯರು ತಪಾಸಣೆ ಮಾಡಿದ್ದು, ಆನೆಯು ಆರೋಗ್ಯದಿಂದ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮರ್ಯಾದೆ ಕೊಡುತ್ತಿಲ್ಲವೆಂದು ಚಿಕ್ಕಪ್ಪನಿಂದಲೇ ಮಗನ ಕೊಲೆ..!
'ಅರಣ್ಯ ಇಲಾಖೆಯ ನಿಯಮದ ಪ್ರಕಾರ ಸಾಕಾನೆಗೆ ವಿಮೆ ಮಾಡಿಸಬೇಕು. ಎರಡೂವರೆ ವರ್ಷಗಳಿಂದ ವಿಮೆ ಮಾಡಿರಲಿಲ್ಲ. ಈಗ ಆರೋಗ್ಯ ತಪಾಸಣೆ ಮಾಡಿಸಿ, ವಿಮೆ ಮಾಡಿದ್ದೇವೆ' ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ಕಾರ್ಯದರ್ಶಿ ಎಸ್.ಕಾತ್ಯಾಯಿನಿದೇವಿ ಮಾಹಿತಿ ನೀಡಿದ್ದಾರೆ.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹಲವಾರು ವರ್ಷಗಳಿಂದ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಉಮಾಮಹೇಶ್ವರಿ ಅನೆ ಭಕ್ತರಿಗೂ ಅಚ್ಚುಮೆಚ್ಚಾಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ