Weather Report: ಶೀಘ್ರದಲ್ಲಿಯೇ ನೈಋತ್ಯ ಮಾನ್ಸೂನ್ ಕದತಟ್ಟಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ, ಇದರಿಂದ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. IMD ಪ್ರಕಾರ, ನೈಋತ್ಯ ಮಾನ್ಸೂನ್ ಲಕ್ಷದ್ವೀಪ ಮತ್ತು ದಕ್ಷಿಣ ಅರೇಬಿಯನ್ ಸಮುದ್ರದ ಭಾಗಗಳಲ್ಲಿ ಮುನ್ನುಗ್ಗುತ್ತಿದ್ದು. ಜೂನ್ 6 ರಿಂದ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇದೇ ವೇಳೆ ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಸೋಮವಾರದವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ ಹೊರಡಿಸಿದ ಎಚ್ಚರಿಕೆಯಲ್ಲಿ, ರಾಜಸ್ಥಾನ, ಛತ್ತೀಸ್‌ಗಢ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ, ಮಾಹೆ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಮಲೆಯಾಗಲಿದೆ ಎಂದು IMD ತಿಳಿಸಿದ್ದು, ಈ ವೇಳೆ ಮಿಂಚು ಹಾಗೂ ಬಲವಾದ ಗಾಳಿ ಸಹಿತ ಗುಡುಗು ಸಿಡಿಲುಗಳು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ-Odisha Train Accident: ಬಾಲಾಸೋರ್ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ರೇಲ್ವೆ ಅಧಿಕೃತ ಹೇಳಿಕೆ ಪ್ರಕಟ
ಮತ್ತೊಂದೆಡೆ, ನಾವು ಕಳೆದ 24 ಗಂಟೆಗಳ ಬಗ್ಗೆ ಹೇಳುವುದಾದರೆ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂನ ಕೆಲವು ಭಾಗಗಳು, ಸಿಕ್ಕಿಂ ಮತ್ತು ಒಳನಾಡಿನ ತಮಿಳುನಾಡಿನಲ್ಲಿ ಮಳೆಯಾಗಿದೆ. ಇದಲ್ಲದೇ ಮುಂದಿನ 24 ಗಂಟೆಗಳಲ್ಲಿಯೂ ಈ ಭಾಗಗಳಳಿಲ್ ಮಳೆಯಾಗುವ ಸಾಧ್ಯತೆ ಇದೆ.
ಯಾವ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ದೇಶದ ಇತರ ರಾಜ್ಯಗಳ ಬಗ್ಗೆ ಹೇಳುವುದಾದರೆ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ, ಹರಿಯಾಣ, ಚಂಡೀಗಢ, ಪಂಜಾಬ್, ಹಿಮಾಚಲ ಪ್ರದೇಶ, ಕೊಂಕಣ-ಗೋವಾದಲ್ಲಿ ಭಾನುವಾರ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿರುವ ನಿರೀಕ್ಷೆಯಿದೆ.
ಮತ್ತೊಂದೆಡೆ, ಹವಾಮಾನ ಇಲಾಖೆ ಪ್ರಕಾರ, ಬಿಹಾರದಲ್ಲಿ ಬಿಸಿಗಾಳಿಯು ಕಳೆದ 17 ವರ್ಷಗಳ ದಾಖಲೆಯನ್ನು ಮುರಿದಿದೆ. ಇಲ್ಲಿ ಮೇ 31, 2007 ರಂದು ತಾಪಮಾನವು 40.7 ಡಿಗ್ರಿಗಳಷ್ಟಿತ್ತು. ಅದರ ನಂತರ ಇದೀಗ 3 ಜೂನ್ 2023 ರಂದು ಅತ್ಯಂತ ಬಿಸಿಯಾದ ದಿನವನ್ನು ದಾಖಲಿಸಲಾಗಿದೆ. ಮಾನ್ಸೂನ್ ಸಾಮಾನ್ಯವಾಗಿ ಜೂನ್ ಆರಂಭದಲ್ಲಿ ಭಾರತಕ್ಕೆ ಆಗಮಿಸುತ್ತದೆ. ಇದು ಜೂನ್ ಮೊದಲ ವಾರದ ವೇಳೆಗೆ ಭಾರತೀಯ ಪರ್ಯಾಯ ದ್ವೀಪದ ದಕ್ಷಿಣ ಭಾಗವನ್ನು ತಲುಪುತ್ತದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.