World Test Championship 2023: ಈ ಅನುಭವಿ ಆಟಗಾರ 5ನೇ ಕ್ರಮಾಂಕದಲ್ಲಿ ಆಡುತ್ತಾರೆ!

World Test Championship 2023: ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಲಂಡನ್‌ಗೆ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಟೀಂ ಇಂಡಿಯಾದ ಪ್ಲೇಯಿಂಗ್-11 ಬಹುತೇಕ ಫಿಕ್ಸ್ ಆಗಿದೆ. ಯಾವ ಆಟಗಾರ 5ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Written by - Puttaraj K Alur | Last Updated : Jun 4, 2023, 08:36 PM IST
  • ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯಲಿದೆ
  • ಅಂತಿಮ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಲಂಡನ್‌ ತಲುಪಿದ್ದು, ಕಠಿಣ ಅಭ್ಯಾಸದಲ್ಲಿದ್ದಾರೆ
  • ಟೀಂ ಇಂಡಿಯಾದ ಪ್ಲೇಯಿಂಗ್-11 ಫಿಕ್ಸ್ ಆಗಿದ್ದು, 5ನೇ ಕ್ರಮಾಂಕದಲ್ಲಿ ಅನುಭವಿ ಆಟಗಾರನಿಗೆ ಅವಕಾಶ
World Test Championship 2023: ಈ ಅನುಭವಿ ಆಟಗಾರ 5ನೇ ಕ್ರಮಾಂಕದಲ್ಲಿ ಆಡುತ್ತಾರೆ! title=
ಟೀಂ ಇಂಡಿಯಾದ ಪ್ಲೇಯಿಂಗ್ 11

ಭಾರತ vs ಆಸ್ಟ್ರೇಲಿಯಾ ಪ್ಲೇಯಿಂಗ್ 11: ಭಾರತ ತಂಡವು ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯವನ್ನು ಆಡಬೇಕಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಉಭಯ ತಂಡಗಳ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಟೀಂ ಇಂಡಿಯಾದ ಪ್ಲೇಯಿಂಗ್-11 ಬಹುತೇಕ ಫಿಕ್ಸ್ ಆಗಿದೆ.

10 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆಲ್ಲುವತ್ತ ಕಣ್ಣು!

ಈ ಮಹತ್ವದ ಪಂದ್ಯಕ್ಕೆ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಕೋಟ್ಯಂತರ ಭಾರತೀಯ ಅಭಿಮಾನಿಗಳು ರೋಹಿತ್ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 10 ವರ್ಷಗಳ ನಂತರ ತಮ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಐಸಿಸಿ ಟ್ರೋಫಿ ಪಡೆಯಲು ರೋಹಿತ್ ಪ್ರಯತ್ನಿಸಲಿದ್ದಾರೆ. ಕಳೆದ ಬಾರಿಯೂ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿತ್ತು. ಆದರೆ 2 ವರ್ಷಗಳ ಹಿಂದೆ ನಡೆದ ಆ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದಿತ್ತು. ಅನುಭವಿ ಎಂ.ಎಸ್.ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 2013ರಲ್ಲಿ ಚಾಂಪಿಯನ್ಸ್ ಟ್ರೋಫಿಯಾಗಿ ಕೊನೆಯ ಬಾರಿಗೆ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: WTC Final ಟೀಂ ಇಂಡಿಯಾದ ಪ್ಲೇಯಿಂಗ್ 11ನಲ್ಲಿ ಈ ಆಟಗಾರನಿಗೆ ಸ್ಥಾನ ಕೊಡದೆ ವಂಚಿಸಿದ್ರಾ ರೋಹಿತ್ ಶರ್ಮಾ?

5ನೇ ಕ್ರಮಾಂಕದಲ್ಲಿ ಯಾರು ಬ್ಯಾಟ್ ಮಾಡುತ್ತಾರೆ?

ಏತನ್ಮಧ್ಯೆ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಟೀಂ ಇಂಡಿಯಾದ 5ನೇ ಸ್ಥಾನದಲ್ಲಿ ಯಾರು ಬ್ಯಾಟ್ ಮಾಡುತ್ತಾರೆ ಎಂದು ಅನೇಕ ಅಭಿಮಾನಿಗಳು ಊಹಿಸುತ್ತಿದ್ದಾರೆ. ಅನುಭವಿ ಅಜಿಂಕ್ಯ ರಹಾನೆ ಈ ಸ್ಥಾನಕ್ಕೆ ಸೂಕ್ತ. ಸುಮಾರು ಒಂದೂವರೆ ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ್ದಾರೆ. ರಹಾನೆ ಮತ್ತು ರವೀಂದ್ರ ಜಡೇಜಾ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲಿದ್ದಾರೆ. ರಹಾನೆ ಬಲಗೈ ಬ್ಯಾಟ್ಸ್‌ಮನ್ ಮತ್ತು ಜಡೇಜಾ ಎಡಗೈ ಬ್ಯಾಟ್ಸ್‌ಮನ್. ಇಂತಹ ಪರಿಸ್ಥಿತಿಯಲ್ಲಿ ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಮಾತ್ರ ಮಧ್ಯಮ ಕ್ರಮಾಂಕವನ್ನು ಅವಲಂಬಿಸಿರುತ್ತಾರೆ. ಜಡೇಜಾ ಅವರನ್ನು 6ನೇ ಕ್ರಮಾಂಕಕ್ಕೆ ಇಳಿಸಿದರೆ, ರಹಾನೆ ಮಾತ್ರ 5ನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ರಹಾನೆಗೆ ಸಾಕಷ್ಟು ಅನುಭವವಿದೆ

ದೇಶಿಯ ಕ್ರಿಕೆಟ್‌ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ರಹಾನೆ ಟೆಸ್ಟ್ ಮಾದರಿಯಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಇದುವರೆಗೆ 82 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 12 ಶತಕ ಭಾರಿಸಿದ್ದು, 4,931 ರನ್ ಗಳಿಸಿದ್ದಾರೆ. ರಹಾನೆ ಟೆಸ್ಟ್‌ನಲ್ಲಿ 25 ಅರ್ಧಶತಕಗಳನ್ನು ಕೂಡ ಗಳಿಸಿದ್ದಾರೆ. ಅವರ ವೃತ್ತಿಜೀವನದಲ್ಲಿ ಈಗ ಕತ್ತಿ ನೇತಾಡುತ್ತಿದೆ. ಹೀಗಾಗಿ ಅವರು WTC ಫೈನಲ್‌ನಲ್ಲಿ ವಿಫಲವಾದರೆ ತಂಡದಿಂದ ಕೈಬಿಡಬಹುದು.

ಇದನ್ನೂ ಓದಿ: ವೆಡ್ಡಿಂಗ್‌ ಕಾರ್ಡ್‌ನಲ್ಲಿ ಧೋನಿ ಫೋಟೋ ಹಾಕಿಸಿದ ಅಭಿಮಾನಿ..!

ಟೀಂ ಇಂಡಿಯಾದ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆ.ಎಸ್.ಭರತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News