"ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ"

ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Jun 6, 2023, 10:25 PM IST
  • ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ.
  • ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು
  • ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ ಎಂದು ಹೇಳಿದರು
"ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ" title=

ಬೆಂಗಳೂರು: ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಈ ಕುರಿತಾಗಿ ಅವರು ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ.ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು ಎಂದರು. 

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ ಎಂದು ಹೇಳಿದರು.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಅವರು ಹೇಳಿದರು.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಅವರು ಭರವಸೆ ನೀಡಿದರು.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗದ ಜನರ ಕಲ್ಯಾಣ ನಮಗೆ ಮುಖ್ಯ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News