ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿಗಳಾದ ಹುಬ್ಬಳ್ಳಿ, ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು, ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jun 7, 2023, 11:11 PM IST
  • ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು, ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
  • ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾನೂನು ಸ್ವಯಂ ಸೇವಕರು ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಲಾಗುವುದು
ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಧಾರವಾಡ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿಗಳಾದ ಹುಬ್ಬಳ್ಳಿ, ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು, ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸದಿರುವ ಪಕ್ಷ ಯಾವುದಿದೆ ಹೇಳಿ ? : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

ಆಸಕ್ತ ವೈಧ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾನೂನು ಸ್ವಯಂ ಸೇವಕರು ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: 200 ಯೂನಿಟ್ ಉಚಿತ ವಿದ್ಯುತ್,‌ 13 ಸಾವಿರ ಕೋಟಿ ಆರ್ಥಿಕ ಹೊರೆ: ಕೆಜೆ ಜಾರ್ಜ್

ಆದ್ದರಿಂದ ಸೇವಾ ಮನೋಭಾವನೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಸಿವ್ಹಿಲ್ ಕೋರ್ಟ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಮಗೆ ಹತ್ತಿರವಿರುವ ನ್ಯಾಯಾಲಯಗಳಲ್ಲಿರುವ ತಾಲೂಕ ಕಾನೂನು ಸೇವಾ ಸಮಿತಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು, ಭರ್ತಿಮಾಡಿ ಜೂನ್ 30, 2023 ರ ಸಂಜೆ 5:30 ರ ಪೂರ್ವದಲ್ಲಿ ಖುದ್ದಾಗಿ ಸಲ್ಲಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್.ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News