ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ, ಅದು ಕಾಂಗ್ರೆಸ್ ಸಂಸ್ಕೃತಿ- ಸಿಎಂ

ನಾಲಿಗೆ ಸಂಸ್ಕೃತಿ ಹೇಳುತ್ತದೆ.

Last Updated : Dec 8, 2017, 02:51 PM IST
  • ಪ್ರಧಾನಿಯವರನ್ನು ನೀಚ ಎಂದು ಟೀಕಿಸಿದ ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
  • ಕೋಮುವಾದಿ ಪಕ್ಷದಿಂದ ಏನೂ ನಿರೀಕ್ಷೆ ಮಾಡಬಾರದು.
  • ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಭಾಷೆ ಗಮನಿಸಿದ್ದೇನೆ. ನಾಲಿಗೆ ಸಂಸ್ಕೃತಿ ಹೇಳುತ್ತದೆ.
ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ, ಅದು ಕಾಂಗ್ರೆಸ್ ಸಂಸ್ಕೃತಿ- ಸಿಎಂ title=
Pic: Twitter

ಮೈಸೂರು: ಪ್ರಧಾನಿಯವರನ್ನು ನೀಚ ಎಂದು ಟೀಕಿಸಿದ ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅದು ಕಾಂಗ್ರೆಸ್ ಸಂಸ್ಕೃತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವಿದ್ಯಾವರ್ಧಕ ಸಂಘದ ವಜ್ರ ಮಹೋತ್ಸವದ ಅಂಗವಾಗಿ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಮಾಜಿ ಸಚಿವರಾದ ಕೆ. ಪುಟ್ಟಸ್ವಾಮಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾಧ್ಯಮಗಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರನ್ನು ನೀಚ ಎಂದು ಟೀಕಿಸಿದ ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅದು ಕಾಂಗ್ರೆಸ್ ಸಂಸ್ಕೃತಿ ಇಂತಹ ಕ್ರಮವನ್ನು ಬಿಜೆಪಿಯಿಂದ ನಿರೀಕ್ಷೆ ಮಾಡಲು ಸಾಧ್ಯವೇ ? ಕೋಮುವಾದಿ ಪಕ್ಷದಿಂದ ಏನೂ ನಿರೀಕ್ಷೆ ಮಾಡಬಾರದು ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಭಾಷೆ ಗಮನಿಸಿದ್ದೇನೆ. ನಾಲಿಗೆ ಸಂಸ್ಕೃತಿ ಹೇಳುತ್ತದೆ. ಆಚಾರವಿಲ್ಲದ ನಾಲಿಗೆ ಎಂದು ದಾಸರೇ ಹೇಳಿದ್ದಾರೆ. ನಮಗೆ ನಮ್ಮದೇ ಆದ ಸಂಸ್ಕೃತಿ, ಸಂಸ್ಕಾರ ಇದೆ ಎಂದು ಬಿಜೆಪಿಯವರು ಹೇಳುತ್ತಾರೆ. ಇದುವೇ ಏನು ಅವರ ಸಂಸ್ಕೃತಿ? ಎಂದು ಪ್ರಶ್ನಿಸಿದರು.

Trending News