2018ರ ಚುನಾವಣೆಯಲ್ಲಿ ವಿಧಾನಸಭೆ ಅತಂತ್ರ ಪರಿಸ್ಥಿತಿಯೇ ಬರುವುದಿಲ್ಲ- ಸಿದ್ದರಾಮಯ್ಯ

               

Last Updated : Dec 8, 2017, 03:09 PM IST
  • ಈಗಾಗಲೇ ಮಾಡಿಸಿರುವ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
  • ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬುದು ಯಡಿಯೂರಪ್ಪ ಅವರ ಭ್ರಮೆ.
  • ಕುಮಾರಸ್ವಾಮಿ, ದೇವೇಗೌಡರು ನನ್ನ ಬಗ್ಗೆ ಮೃದು ಧೋರಣೆ ತೋರಿಸುವುದೇನೂ ಬೇಡ
2018ರ ಚುನಾವಣೆಯಲ್ಲಿ ವಿಧಾನಸಭೆ ಅತಂತ್ರ ಪರಿಸ್ಥಿತಿಯೇ ಬರುವುದಿಲ್ಲ- ಸಿದ್ದರಾಮಯ್ಯ title=

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ಪರಿಸ್ಥಿತಿಯೇ ಬರುವುದಿಲ್ಲ. ನಾನು ಸಹ ಸಮೀಕ್ಷೆ ಮಾಡಿಸುತ್ತಿದ್ದೇನೆ. ಈಗಾಗಲೇ ಮಾಡಿಸಿರುವ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಎರಡನೇ ಹಂತದ  ಸಮೀಕ್ಷಾ ವರದಿ ಜನವರಿಯಲ್ಲಿ ಕೈ ಸೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬುದು ಯಡಿಯೂರಪ್ಪ ಅವರ ಭ್ರಮೆ. ನಮ್ಮದು ಪಿಕ್ ಪಾಕೆಟ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡುತ್ತಾರೆ. ನಾವು ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ ಸೇರಿದಂತೆ  ಎಲ್ಲ ಭಾಗ್ಯ ಯೋಜನೆಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳುತ್ತಾರೆ. ಹಾಗಾದರೆ ಇವರು ಯಾರ ಪರ ಇದ್ದಾರೆ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ, ದೇವೇಗೌಡರು ನನ್ನ ಬಗ್ಗೆ ಮೃದು ಧೋರಣೆ ತೋರಿಸುವುದೇನೂ ಬೇಡ ಎಂದು ಗರಂ ಆದ ಸಿದ್ದರಾಮಯ್ಯ ರಾಜ್ಯದ ಜನತೆಗೆ ನಾವು ಜಾರಿಗೆ ತಂದಿರುವ  ಯೋಜನೆಗಳ ಬಗ್ಗೆ ಸತ್ಯ ಹೇಳಿದರೆ ಸಾಕು ಎಂದು ಹೇಳಿದರು.

Trending News