MeToo case: ಶ್ರುತಿ ಹರಿಹರನ್‌ಗೆ ಕೋರ್ಟ್‌ ನೋಟಿಸ್‌

Sruthi Hariharan: 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದ ಸಮಯದಲ್ಲಿ ನಟಿ ಶ್ರುತಿ ಹರಿಹರನ್ ತಮ್ಮ ವಿರುದ್ಧವೂ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪಿಸಿದ್ದರು. ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.   

Written by - Chetana Devarmani | Last Updated : Jun 9, 2023, 11:39 AM IST
  • 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನ
  • ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ
  • ಶ್ರುತಿ ಹರಿಹರನ್‌ಗೆ ಕೋರ್ಟ್‌ ನೋಟಿಸ್‌
MeToo case: ಶ್ರುತಿ ಹರಿಹರನ್‌ಗೆ ಕೋರ್ಟ್‌ ನೋಟಿಸ್‌   title=

ಬೆಂಗಳೂರು :  'ವಿಸ್ಮಯ' ಚಿತ್ರದ ಶೂಟಿಂಗ್ ವೇಳೆ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನ ನಡೆಯುತ್ತಿದ್ದ ಸಮಯದಲ್ಲಿ ಶ್ರುತಿ ಹರಿಹರನ್‌ ಈ ಆರೋಪ ಮಾಡಿದ್ದರು. ಈ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ಕೂಡ ದಾಖಲಾಗಿತ್ತು. 

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಸಾಕ್ಷ್ಯ ಒದಗಿಸುವಂತೆ ನಟಿ ಶ್ರುತಿ ಹರಿಹರನ್ ಅವರಿಗೆ ಬೆಂಗಳೂರಿನ 8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯ ಇದೀಗ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ʼA2 ಮ್ಯೂಸಿಕ್ʼ ಆಲ್ಬಂ ಸೀರೀಸ್ ರಿಲೀಸ್ ಮಾಡಿದ ನಟ ಅಜಯ್ ರಾವ್..!

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಸಲ್ಲಿಸಿರುವ ಬಿ-ರಿಪೋರ್ಟ್ ಪ್ರಶ್ನಿಸಿ ಹರಿಹರನ್ಅರ್ಜಿ ಸಲ್ಲಿಸಿದ್ದರು. ಈ ಮೇಲ್ಮನವಿಯನ್ನು ಒಪ್ಪಿರುವ ಕೋರ್ಟ್‌, ಪೊಲೀಸರಿಗೆ ಸಾಕ್ಷ್ಯಗಳನ್ನು ಒದಗಿಸುವಂತೆ ನಟಿ ಶ್ರುತಿಗೆ ನೋಟಿಸ್ ನೀಡಿದೆ. 

ಅಕ್ಟೋಬರ್ 2018 ರಲ್ಲಿ ಶ್ರುತಿ ಹರಿಹರನ್‌ ಸಾಮಾಜಿಕ ಮಾಧ್ಯಮದಲ್ಲಿ 4 ಪುಟಗಳ ಪತ್ರದಲ್ಲಿ ತನ್ನ ಸಹನಟ ಅರ್ಜುನ್ ಸರ್ಜಾ 'ವಿಸ್ಮಯ' ಚಿತ್ರದ ಶೂಟಿಂಗ್ ವೇಳೆ ತನ್ನ ಜೊತೆ ಲೈಂಗಿಕ ದುರ್ವರ್ತನೆ ಮತ್ತು ಅನುಚಿತ ವರ್ತನೆಯನ್ನು ತೋರಿದ್ದಾರೆ ಎಂದು ಆರೋಪಿಸಿದ್ದರು. ನಂತರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಆದಿಪುರುಷ ಸಿನಿಮಾದ 10 ಸಾವಿರ ಟಿಕೆಟ್ ಬುಕ್‌ ಮಾಡಿದ ಬಾಲಿವುಡ್‌ ನಟ

ಈ ಕುರಿತು ಮೂರು ವರ್ಷ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 2021 ರಲ್ಲಿ ಬಿ ರಿಪೋರ್ಟ್ ಸಲ್ಲಿಸಿದರು. ಪೊಲೀಸರಿಗೆ ಪ್ರಥಮ ಮಾಹಿತಿ ವರದಿಯಲ್ಲಿ ಮಾಡಿದ ಆರೋಪದ ಬಗ್ಗೆ ಯಾವುದೇ ಪುರಾವೆಗಳು ಸಿಗದಿರುವ ಕಾರಣ ಅವರು ಬಿ ರಿಪೋರ್ಟ್‌ ಸಲ್ಲಿಸಿದ್ದರು.

ಜನವರಿ 13, 2022 ರಂದು, ಬೆಂಗಳೂರು ನ್ಯಾಯಾಲಯವು ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಅಂಗೀಕರಿಸಿತು. ಆ ಬಳಿಕ ಶ್ರುತಿ ಹರಿಹರನ್ ನಗರದ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಚಾಲೆಂಜ್‌ ಮಾಡಿ ಮೇಲ್ಮನವಿ ಸಲ್ಲಿಸಿದರು. ಅರ್ಜಿಯನ್ನು ಆಲಿಸಿದ ನ್ಯಾಯಾಲಯ, ಪ್ರಕರಣದಲ್ಲಿ ಪೊಲೀಸರಿಗೆ ಸಾಕ್ಷ್ಯವನ್ನು ಒದಗಿಸುವಂತೆ ನಟಿಗೆ ಸೂಚನೆ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News