ಬಿಜೆಪಿ ಬೆಂಬಲದಿಂದ ಮತ್ತಷ್ಟು ಶಕ್ತಿ ಬಂದಿದೆ: ಸುಮಲತಾ ಅಂಬರೀಶ್

ಬಿಜೆಪಿ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿರುವುದು ಮತ್ತಷ್ಟು ಬಲ ಬಂದಂತಾಗಿದೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

Last Updated : Mar 24, 2019, 05:25 PM IST
ಬಿಜೆಪಿ ಬೆಂಬಲದಿಂದ ಮತ್ತಷ್ಟು ಶಕ್ತಿ ಬಂದಿದೆ: ಸುಮಲತಾ ಅಂಬರೀಶ್ title=

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಬೆಂಬಲ ನೀಡುವುದರಿಂದ ನನಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಮಂಡ್ಯ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದ್ದಾರೆ. 

ಅಂಬರೀಶ್ ಅವರ ನಾಲ್ಕನೇ ತಿಂಗಳ ಪುಣ್ಯ ತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಮಲತಾ, ಬಿಜೆಪಿ ಬೆಂಬಲ ನೀಡುವ ಬಗ್ಗೆ ಅಧಿಕೃತ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಜೊತೆಗೆ ಕಾಂಗ್ರೆಸ್ ನಾಯಕರ ಬೆಂಬಲವೂ ಇದೆ. ಸದ್ಯದಲ್ಲೇ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುತ್ತೇನೆ ಎಂದರು.

ಚುನಾವಣೆಯಲ್ಲಿ ಗೆದ್ದರೆ ಬಿಜೆಪಿ ಸೇರ್ಪಡೆಯಾಗುತ್ತೀರಾ ಎಂಬ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಮಲತಾ, ಜನರು ಚುನಾವಣೆಯಲ್ಲಿ ನಿಲ್ಲಬೇಕು ಎಂದು ಹೇಳಿದ್ದರಿಂದ ಜನರಿಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಅವರು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೇನೆ. ಅದರಂತೆ ಬಿಜೆಪಿ ಸೇರುವ ವಿಚಾರವನ್ನೂ ಜನರ ಅಭಿಪ್ರಾಯ ಪಡೆದು ಬಳಿಕ ನಿರ್ಧರಿಸುತ್ತೇನೆ ಎಂದು ಹೇಳಿದರು. 
 

Trending News