ಬೆಂಗಳೂರು : BMTC ಹಾಗೂ KSRTC ಸೇರಿದಂತೆ ಇತರೆ ನಾಲ್ಕು ನಿಗಮಗಳಿಗೆ ಹೆಚ್ಚುವರಿಯಾಗಿ ಇಂಧನ, ವೇತನ ಪರಿಷ್ಕರಣೆಗೆ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಆರ್ಥಿಕ ಇಲಾಖೆ ತಿಳಿಸಿದೆ.
ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮಾಡಲು ನಿಗಮ ಸರ್ಕಾರಕ್ಕೆ ಮನವಿ ಮಾಡಿತ್ತು, ಆರ್ಥಿಕ ಇಲಾಖೆ ಇದಕ್ಕೆ ಇದಕ್ಕೆ ಸಮ್ಮತಿ ಸೂಚನೆ ಮಾಡದಿರುವ ಕಾರಣ, ಈಗ ವೇತನ ಪರಿಷ್ಕರನೆಯಿಂದ ಆಗುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವಂತೆ ನಿರ್ದೇಶನ ನೀಡಲಾಗಿದೆ. ಜೊತೆಗೆ ವೇತನ ಪಾವತಿ ಹಾಗೂ ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುಧಾನವನ್ನು ಭರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ ಎಸ್ ಆದೇಶ ನೀಡಿದ್ದಾರೆ.
“Karnataka finance dept informs RTCs including @KSRTC_Journeys & @BMTC_BENGALURU that it cannot provide additional grant for payment of wages & fuel expenditure.
ಶಕ್ತಿ ಯೋಜನೆಯಿಂದಾಗಿ ಕ.ರಾ.ರ.ಸಂ, BMTC ಹಾಗು ಇತರೆ ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ಹೆಚ್ಚುವರಿ ಅನುದಾನ… pic.twitter.com/KLaIHy01Bm
— Basanagouda R Patil (Yatnal) (@BasanagoudaBJP) June 14, 2023
ಇದನ್ನೂ ಓದಿ: ರಾಜ್ಯಗಳಿಗೆ ಅಕ್ಕಿ ಮಾರಾಟ ವಿಚಾರ: ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗರಂ
ಇದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,ಶಕ್ತಿ ಯೋಜನೆಯಿಂದಾಗಿ ಕ.ರಾ.ರ.ಸಂ, BMTC ಹಾಗು ಇತರೆ ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ಹೆಚ್ಚುವರಿ ಅನುದಾನ ನೀಡಲಾಗುವುದಿಲ್ಲವೆಂದು ಆರ್ಥಿಕ ಇಲಾಖೆ ಸಾರಿಗೆ ಸಂಸ್ಥೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. @siddaramaiah ನವರೇ ಸಾರಿಗೆ ಸಂಸ್ಥೆಗಳ ನೌಕರರ ಸಂಬಳ ಹಾಗು ನಿಗಮಗಳ ಅಭಿವೃದ್ಧಿಯ ಕಥೆ ಏನು?, ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.