Chattisgarh: ಛತ್ತೀಸ್ಗಢದ ಕಾಂಗ್ರೆಸ್ ಶಾಸಕಿ ಅನಿತಾ ಶರ್ಮಾ ಅವರು 'ಹಿಂದೂ ರಾಷ್ಟ್ರ' ರಚಿಸಲು ಜನರು ಒಂದಾಗಬೇಕು ಎಂದು ಶುಕ್ರವಾರ ಕರೆ ನೀಡಿದ್ದಾರೆ. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಒತ್ತು ನೀಡಿದ ಅವರು, ಇದಕ್ಕಾಗಿ ಎಲ್ಲಾ ಹಿಂದೂಗಳು ಮುಂದೆ ಬರುವಂತೆ ಅವರು ಮನವಿ ಮಾಡಿದ್ದಾರೆ. ಶುಕ್ರವಾರ ತಮ್ಮ ಭದ್ರಕೋಟೆ ರಾಯ್ಪುರದಲ್ಲಿ 'ಧರ್ಮ ಸಭೆ'ಯನ್ನು ಉದ್ದೇಶಿಸಿ ಮಾತನಾಡಿದ ಧರ್ಶಿವ ಕ್ಷೇತ್ರದ ಶಾಸಕಿ ಅನಿತಾ ಶರ್ಮಾ ಅವರು ಹಿಂದೂ ರಾಷ್ಟ್ರವನ್ನು ರಚಿಸಲು ಹಿಂದೂಗಳು ಒಗ್ಗೂಡಬೇಕು ಎಂದು ಕರೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರಿ ವೈರಲ್ ಆಗುತ್ತಿದೆ.
ಶಾಸಕರು ಸ್ಥಳೀಯ ಛತ್ತೀಸ್ಗಢ ಭಾಷೆಯಲ್ಲಿ ಮಾತನಾಡಿ, ‘ನಾವೆಲ್ಲರೂ ಎಲ್ಲೇ ಇದ್ದರೂ... ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ಮಾಡಬೇಕು...ಹಿಂದೂಗಳ ಪರ ಮಾತನಾಡಬೇಕು, ಹಿಂದೂಗಳೆಲ್ಲ ಒಗ್ಗೂಡಿದಾಗ ಮಾತ್ರ ಇದು ಸಾಧ್ಯ’ ಎಂದಿದ್ದಾರೆ.
ಆದಾಗ್ಯೂ, ಕಾಂಗ್ರೆಸ್ ಪಕ್ಷದ ಚತ್ತೀಸ್ಗಢ್ ಘಟಕ ಅವರ ಹೇಳಿಕೆಯನ್ನು ಪರಿಗಣಿಸಲು ನಿರಾಕರಿಸಿದೆ ಮತ್ತು ಇದು "ವೈಯಕ್ತಿಕ ಅಭಿಪ್ರಾಯ"ವಾಗಿದೆ ಎಂದು ಹೇಳಿದೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಛತ್ತೀಸ್ಗಢ ಕಾಂಗ್ರೆಸ್ನ ಸಂವಹನ ಮುಖ್ಯಸ್ಥ ಮತ್ತು ವಕ್ತಾರ ಸುಶೀಲ್ ಆನಂದ್ ಶುಕ್ಲಾ ಇದು ಅನಿತಾ ಶರ್ಮಾ ಅವರ "ವೈಯಕ್ತಿಕ ಹೇಳಿಕೆ" ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನದ ಜೊತೆಗೆ ನಿಂತಿದೆ ಎಂದಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್, ಪಂಡಿತ್ ಜವಾಹರಲಾಲ್ ನೆಹರು ಮತ್ತು ಡಾ. ರಾಜೇಂದ್ರ ಪ್ರಸಾದ್ ಅವರಂತಹ ನಾಯಕರು ರಚಿಸಿದ ಮಹಾನ್ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತತೆಯ ಬುನಾದಿಯ ಮೇಲೆ ಕಾಂಗ್ರೆಸ್ ದೃಢವಾಗಿ ನಿಂತಿದೆ ಎಂದಿದ್ದಾರೆ .
ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಸಿದ್ಧಾಂತವನ್ನು ಹೊಂದಬಹುದು ಮತ್ತು ಕಾಂಗ್ರೆಸ್ ಪಕ್ಷವು ಭಿನ್ನಾಭಿಪ್ರಾಯಗಳನ್ನು ಸ್ವಾಗತಿಸುತ್ತದೆ ಎಂದು ಶುಕ್ಲಾ ಹೇಳಿದ್ದಾರೆ. ಆದರೆ, ಶನಿವಾರ, ಶರ್ಮಾ ಅವರು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಈ ದೇಶದಲ್ಲಿ ವಾಸಿಸುವ ಎಲ್ಲ ಜನರ ಒಗ್ಗಟ್ಟಿನ ಬಗ್ಗೆ ತಾವು ಮಾತನಾಡಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ-MP: 'ಮುಸ್ಲಿಂ ಯುವತಿಯರನ್ನು ವಿವಾಹವಾಗುವ ಹಿಂದೂ ಯುವಕರಿಗೆ 11 ಸಾವಿರ ನಗದು ಬಹುಮಾನ'
“ನಾನು ಗಾಂಧಿವಾದಿ ಮತ್ತು ಗಾಂಧೀಜಿ ಅವರು ದ್ವೇಷವನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ ... ಎಲ್ಲಾ ಧರ್ಮದ ಜನರು ಸಹೋದರರು ... ನಾನು ಭಾರತದಲ್ಲಿ ವಾಸಿಸುವ ಎಲ್ಲ ಜನರ ಏಕತೆಯ ಬಗ್ಗೆ ಮಾತನಾಡುತ್ತಿದ್ದೆ ... ನನ್ನ ಪಾಲಿಗೆ ಹಿಂದೂ ರಾಷ್ಟ್ರದ ಪರಿಕಲ್ಪನೆಯು ಎಲ್ಲಾ ಧರ್ಮಗಳ ಏಕತೆಯಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಅಷ್ಟೇ ಅಲ್ಲ ತಮ್ಮ ಹೇಳಿಕೆಯ ಕುರಿತಂತೆ ರಾಜಕೀಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Partition Of India: 'ನೇತಾಜಿ ಬದುಕಿದ್ದರೆ ಭಾರತದ ವಿಭಜನೆಯಾಗುತ್ತಿರಲಿಲ್ಲ' ಜಿನ್ನಾ ಕೂಡ... ಎಂದ NSA ಅಜಿತ್ ದೊವಲ್
ಶರ್ಮಾ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷದ ವಕ್ತಾರ ಕೇದಾರ್ ಗುಪ್ತಾ, ಹಿಂದೂ ರಾಷ್ಟ್ರ ಮತ್ತು ರಾಮರಾಜ್ಯದ ಬಗ್ಗೆ ಮಾತನಾಡಲು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಕ್ಕಿಲ್ಲ. "ಏಕರೂಪ ನಾಗರಿಕ ಸಂಹಿತೆ ಬರಲಿದೆ...ಅವರು ಅದನ್ನು ಬೆಂಬಲಿಸುತ್ತಾರೆಯೇ? ಕಾಂಗ್ರೆಸ್ ನ ಹೇಳಿಕೆ ಮತ್ತು ಮಾಡುವ ಕೆಲಸ ಎರಡರ ನಡುವೆ ಅಂತರ ಇದೆ" ಎಂದು ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ