Coffee Board Recruitment 2023: ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Coffee Board Recruitment 2023: 2 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.

Written by - Puttaraj K Alur | Last Updated : Jun 26, 2023, 03:25 PM IST
  • ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಹುದ್ದೆಗಳ ನೇಮಕಾತಿಗೆ ಪ್ರಕಟಣೆ
  • ಈ ನೇಮಕಾತಿಯಡಿ 2 ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು
Coffee Board Recruitment 2023: ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ  title=
ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ

ಬೆಂಗಳೂರು: ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಯಡಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ವಿವರ: ಬೆಂಗಳೂರಿನ ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಯುಎಸ್,ಈಜಿಪ್ಟ್ ನ ಐತಿಹಾಸಿಕ ಪ್ರವಾಸ ಮುಗಿಸಿ ಭಾರತಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಶೈಕ್ಷಣಿಕ ಅರ್ಹತೆ: ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .ವಯೋಮಿತಿ: ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಆಸಕ್ತರು ಅಧಿಕೃತ ಅಧಿಸೂಚನೆಯಲ್ಲಿ ಈ ಬಗ್ಗೆ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.comಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಪ್ರಮುಖ ದಿನಾಂಕ: ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023 ಆಗಿರುತ್ತದೆ. ನೀವು ಕಳುಹಿಸುವ ಇ-ಮೇಲ್‍ನ subjectನಲ್ಲಿ “Application for the post of Technical assistants – Chemistry/Microbiology)” ಎಂದು ಬರೆದಿರಬೇಕು.

ಇದನ್ನೂ ಓದಿ: POK ವಿಚಾರದಲ್ಲಿ ಚೀನಾ - ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್‌ ಎಚ್ಚರಿಕೆ

ಅರ್ಜಿ ಡೌನ್​ಲೋಡ್ ಮಾಡುವುದು ಹೇಗೆ?: ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ವೆಬ್‍ಸೈಟ್‍ಗೆ ತೆರಳಿ ನೋಟಿಫಿಕೇಷನ್ ಬರುತ್ತಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ indiacoffee.org ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News