Mamata Banerjee: ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ಗಾಯಗೊಂಡ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು!

Mamata Banerjee Helicopter Emergency landing: ಜಲ್ಪೈಗುರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಂತರ ಮಮತಾ ಬ್ಯಾನರ್ಜಿಯವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು.  

Written by - Puttaraj K Alur | Last Updated : Jun 27, 2023, 05:42 PM IST
  • ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
  • ಹವಾಮಾನ ವೈಪರೀತ್ಯದಿಂದ ಸಿಲಿಗುರಿ ಸಮೀಪದ ಸೆವೊಕೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
  • ಘಟನೆಯಲ್ಲಿ ಮಮತಾ ಬ್ಯಾನರ್ಜಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೇಫ್ ಆಗಿದ್ದಾರೆಂದ ಟಿಎಂಸಿ ನಾಯಕ
Mamata Banerjee: ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ಗಾಯಗೊಂಡ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು! title=
ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಅವರಿಗೆ ಪೆಟ್ಟು ಬಿದ್ದಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.

ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಕೆಟ್ಟ ವಾತಾವರಣದಲ್ಲಿ ಸಿಲುಕಿಕೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಮಂಗಳವಾರ ಮಧ್ಯಾಹ್ನ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಿಲಿಗುರಿ ಸಮೀಪದ ಸೆವೊಕೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

ಇದನ್ನೂ ಓದಿ: Viral Video: ತನ್ನ ಮನೆಯಲ್ಲಿ ಮೊದಲ ಬಾರಿಗೆ ವಿದ್ಯುತ್ ವ್ಯವಸ್ಥೆ ಕಂಡ 70 ವಯಸ್ಸಿನ ವಯೋವೃದ್ಧೆ ; ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮ!

ಜಲ್ಪೈಗುರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಂತರ ಮಮತಾ ಬ್ಯಾನರ್ಜಿಯವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಬೈಕುಂತ್‌ಪುರ ಅರಣ್ಯದ ಮೇಲೆ ಹಾರುತ್ತಿದ್ದಾಗ ಅವರ ಹೆಲಿಕಾಪ್ಟರ್ ಕೆಟ್ಟ ಹವಾಮಾನದ ಹೊಡೆತಕ್ಕೆ ತುತ್ತಾಯಿತು.

ಮಮತಾರ ಹೆಲಿಕಾಪ್ಟರ್  ಪ್ರಯಾಣಿಸುತ್ತಿದ್ದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ಮಮತಾ ಬ್ಯಾನರ್ಜಿ ಅವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಿ ನಂತರ ಕೋಲ್ಕತ್ತಾಗೆ ಹಿಂತಿರುಗಲು ನಿರ್ಧರಿಸಿದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Viral Video : ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ..!

ಪಂಚಾಯತ್ ಚುನಾವಣೆ ಪ್ರಚಾರಕ್ಕಾಗಿ ಮಮತಾ ಅವರು ವಾಯವ್ಯ ಬಂಗಾಳದ ಕೆಲವು ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಜುಲೈ 8ರಂದು ಮತದಾನ ನಡೆಯಲಿದೆ. ಮಮತಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಸೇಫ್ ಆಗಿದ್ದಾರೆಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ತಿಳಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News