CIPET Mysuru: ವಿವಿಧ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

CIPET Mysuru: ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ.

Written by - Zee Kannada News Desk | Last Updated : Jun 27, 2023, 09:18 PM IST
  • ಮೈಸೂರಿನ ಸಿಪೆಟ್ ಸಂಸ್ಥೆಯಲ್ಲಿ ವಿವಿಧ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
  • ಡಿಪ್ಲೋಮಾದ ಕೊನೆ ಸೆಮಿಸ್ಟರ್‍ನಲ್ಲಿ ಕ್ಯಾಂಪಸ್ ಆಯ್ಕೆ ಮೂಲಕ ಉದ್ಯೋಗ ದೊರಕಿಸಿಕೊಡುವ ಉದ್ದೇಶ
  • 2 ಮತ್ತು 3 ವರ್ಷದ ವಿವಿಧ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
CIPET Mysuru: ವಿವಿಧ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ title=
ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಮೈಸೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. 

ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ. ಈ ವೃತ್ತಿಪರ ಡಿಪ್ಲೋಮಾದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಇದನ್ನೂ ಓದಿ: ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರೊಳಗೆ ಅಂತಿಮ ವರದಿ ಸಲ್ಲಿಕೆಗೆ ಸೂಚನೆ

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ನೇರ ಪ್ರವೇಶ ಪಡೆಯಬಹುದು.

ಇದನ್ನೂ ಓದಿ: ಈ ವರ್ಷ ನಿರೀಕ್ಷೆಗಿಂತ ಕಡಿಮೆ ಮಳೆ; ಬೆಂಗಳೂರಿನ ನೀರು ನೆರೆ ಜಿಲ್ಲೆಗಳಿಗೆ

ಹೆಚ್ಚಿನ ಮಾಹಿತಿಗೆ ಸಿಪೆಟ್, 437/A, ಹೆಬ್ಬಾಳ್ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016. ದೂ.ಸಂ.0821-2510618/ 9480253024/ 9791431827. ವೆಬ್‍ಸೈಟ್ www.cipet.gov.inನ್ನು ಸಂಪರ್ಕಿಸಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News