ಬಳ್ಳಾರಿ: ಕಂಪ್ಲಿ ಪಟ್ಟಣದಲ್ಲಿ ಜಿಲ್ಲಾ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆಂದೋಲನ, ಪೆÇೀಲಿಸ್ ಇಲಾಖೆ,ˌ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮಂಗಳವಾರದಂದು ಕಾರ್ಮಿಕ ನಿರೀಕ್ಷಕರಾದ ಎಂ.ಅಶೋಕ, ಬಚಪನ್ ಬಚಾವೋ ಆದೋಲನ ರಾಜ್ಶ ಸಮನ್ವಯಾಧಿಕಾರಿ ಬೀನು ವರ್ಗೀಸ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 04 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ: ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಚೇಸ್ ಮಾಡಿ ಹಿಡಿದ KSRTC ನಿರ್ವಾಹಕ,ಚಾಲಕ..!
ಪಟ್ಟಣದ ವಿವಿಧೆಡೆ ಗ್ಯಾರೇಜ್, ಬೇಕರಿ, ಶಾಮಿಯಾನ ಸಪ್ಲೆಯರ್ಸ್, ಮೆಕ್ಯಾನಿಕ್ ಶಾಪ್ ಇತ್ಯಾದಿ ಅಂಗಡಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) 1986 ಕಾಯ್ದೆ ಉಲ್ಲಂಘನೆ ಮಾಡಿದ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 04 ಕಿಶೋರ ಕಾರ್ಮಿಕನ್ನು ಕೆಲಸದಿಂದ ಬಿಡುಗಡೆಗೊಳಿಸಿ 03 ಮಕ್ಕಳ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ವಿದ್ಯಾಭ್ಯಾಸವನ್ನು ಮುಂದುವರೆಸುವಂತೆ ಮನವೊಲಿಸಿ ಪೋಷಕರಿಗೆ ಒಪ್ಪಿಸಲಾಯಿತು.
ಮಾಲೀಕರ ವಿರುದ್ದ ಕಂಪ್ಲಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದೇ ಸಂದರ್ಭದಲ್ಲಿ ಕಾಯ್ದೆಯ ಕರಪತ್ರ ಮತ್ತು ಸ್ಟೀಕರ್ಸ್ ಹಂಚುವುದರ ಮೂಲಕ ಕಾನೂನು ಅರಿವು ಮೂಡಿಸಲಾಯಿತು ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.