ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕೆ ಆರ್ ಪುರಂ ತಹಶೀಲ್ದಾರ್ ಹಾಗೂ ಕೆಎಎಸ್ ಅಧಿಕಾರಿ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿ ತಡರಾತ್ರಿಯವರೆಗೂ ಪರಿಶೀಲನೆ ಮುಂದುವರೆಸಲಾಗಿತ್ತು ಇಂದು ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Crime News: ಪತ್ನಿ, ಮಗನನ್ನು ಸಮುದ್ರಕ್ಕೆ ತಳ್ಳಿ ಉದ್ಯಮಿ ಆತ್ಮಹತ್ಯೆಗೆ ಶರಣು!
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನಗರ ವಿಭಾಗದ ಎಸ್ಪಿ ಅಶೋಕ್ ನೇತೃತ್ವದ ತಂಡ ಬುಧವಾರ ಅಜಿತ್ ರೈ ಅವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಸಹಕಾರ ನಗರ, ರಾಮಮೂರ್ತಿ ನಗರದಲ್ಲಿರುವ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಅಜಿತ್ ಅವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಮಹತ್ವದ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಇದನ್ನೂ ಓದಿ: ಗೃಹಲಕ್ಷ್ಮೀ ಅರ್ಜಿಗೆ ಯಾರೂ ಹಣ ಕೊಡಬೇಡಿ - ಲಕ್ಷ್ಮೀ ಹೆಬ್ಬಾಳಕರ್ ಮನವಿ
ಈ ಹಿಂದೆ ಕೆ ಆರ್ ಪುರದ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಜಿತ್, ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ ಹೈಕೋರ್ಟ್ನಿಂದ ತಡೆಯಾಜ್ಞೆ ತರಲು ನೆರವು ನೀಡಿದ್ದರು ಎಂಬ ಆರೋಪದಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಕೆಲ ದಿನಗಳ ಹಿಂದೆ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದ್ದರಿಂದ ಮತ್ತೆ ಕೆ ಆರ್ ಪುರ ತಹಶೀಲ್ದಾರ್ ಆಗಿ ಅಜಿತ್ ಬಂದಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ಸ್ಥಳ ತೋರಿಸದೆ ಅಜಿತ್ ರೈ ಅವರನ್ನ ವರ್ಗಾವಣೆ ಮಾಡಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.