ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತು ಗೆಲ್ಲಲಾಗದ ದೊಣ್ಣೆನಾಯಕರೊಬ್ಬರು RSSನ ದೊಣ್ಣೆ ತೋರಿಸಿ ಇಡೀ ಬಿಜೆಪಿಯನ್ನು ಅಲ್ಲಾಡಿಸುತ್ತಿದ್ದಾರೆ!ಬಿ.ಎಲ್.ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ!ನಿಮ್ಮ ದಮ್ಮು ತಾಕತ್ತು ನಿರೂಪಿಸಿ! ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಸವಾಲು ಹಾಕಿದೆ.
ಬಿಜೆಪಿ ನಾಯಕ ರೇಣುಕಾಚಾರ್ಯ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷವು ಟೀಕಾ ಪ್ರಹಾರ ನಡೆಸಿದೆ.
ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸುವ ಬಡವರ ಅನ್ನ ಕಿತ್ತುಕೊಂಡಿದ್ದಕ್ಕೆ ಸೋಲಾಗಿದೆ ಎಂದು ಪ್ರಾಮಾಣಿಕ ವಿಮರ್ಶೆ ಮಾಡಿಕೊಂಡಿದ್ದಾರೆ ಬಿಜೆಪಿಯ ರೇಣುಕಾಚಾರ್ಯ.ಬೊಮ್ಮಾಯಿ ಅವರೇ,ನಿಮ್ಮದೇ ಪಕ್ಷದ ರೇಣುಕಾಚಾರ್ಯರ ಈ ಮಾತುಗಳನ್ನು ಕೇಳಿ ತಾವು ತಲೆತಗ್ಗಿಸಿ ನಿಲ್ಲಬೇಕಿತ್ತು.ನಿಮಗೆ ಪಾಪಪ್ರಜ್ಞೆ ಕಾಡಬೇಕಿತ್ತು.ಅದು ಬಿಟ್ಟು ನಮ್ಮ ಅನ್ನಭಾಗ್ಯದ ಬಗ್ಗೆ ಕುಹುಕದ ಮಾತಾಡುತ್ತಿದ್ದೀರಿ ಎಂದರೆ ನಿರ್ಲಜ್ಜತನದ ಪರಮಾವಧಿಗೆ ತಲುಪಿದ್ದೀರಿ ಎಂದೇ ಅರ್ಥ ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತು ಗೆಲ್ಲಲಾಗದ ದೊಣ್ಣೆನಾಯಕರೊಬ್ಬರು RSSನ ದೊಣ್ಣೆ ತೋರಿಸಿ ಇಡೀ ಬಿಜೆಪಿಯನ್ನು ಅಲ್ಲಾಡಿಸುತ್ತಿದ್ದಾರೆ!ಬಿ.ಎಲ್.ಸಂತೋಷ್ ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ!ನಿಮ್ಮ ದಮ್ಮು ತಾಕತ್ತು ನಿರೂಪಿಸಿ! ಎಂದು ಸವಾಲು ಹಾಕಿದೆ.
ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತು ಗೆಲ್ಲಲಾಗದ ದೊಣ್ಣೆನಾಯಕರೊಬ್ಬರು RSSನ ದೊಣ್ಣೆ ತೋರಿಸಿ ಇಡೀ ಬಿಜೆಪಿಯನ್ನು ಅಲ್ಲಾಡಿಸುತ್ತಿದ್ದಾರೆ!@blsanthosh ಅವರೇ, ರೇಣುಕಾಚಾರ್ಯರ ಈ ಮಾತನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಗ್ರಾಂ.ಪಂ ಚುನಾವಣೆಗೆ ಸ್ಪರ್ದಿಸಿ ಗೆದ್ದು ತೋರಿಸಿ!
ನಿಮ್ಮ ದಮ್ಮು ತಾಕತ್ತು ನಿರೂಪಿಸಿ!#BJPvsBJP pic.twitter.com/cBxbqkxs4B
— Karnataka Congress (@INCKarnataka) June 30, 2023
ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ!ಬಂಧನದಿಂದ ಹೊರಬರಬೇಕು ಎಂದರೆ ಆ "ಪಂಚೆ"ಯನ್ನು ಹರಿಯಲೇಬೇಕು!ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ.ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು! ಎಂದು ಕುಟುಕಿದೆ.
ಬಿಎಸ್ವೈ ಬ್ರಿಗೇಡ್ ನವರ ಈ ಪ್ರಶ್ನೆ ಸಮಂಜಸ ಅಲ್ಲವೇ?ಬಿಎಸ್ವೈ ಅವರ ವಿರುದ್ಧ ಹಿನಾಯವಾಗಿ ಮಾತನಾಡುತ್ತಿದ್ದವರ ವಿರುದ್ಧ ಒಂದೇ ಒಂದು ನೋಟಿಸ್ ನೀಡದ ಬಿಜೆಪಿ ಪಕ್ಷ ಸಂತೋಷ ಕೂಟದ ವಿರುದ್ಧ ಮಾತನಾಡಿದ 24 ಗಂಟೆಯೊಳಗೆ ನೋಟಿಸ್ ನೀಡಲಾಗಿದೆ.ಬಿಎಸ್ವೈ ಅಂದರೆ ಅಷ್ಟೊಂದು ತಾತ್ಸಾರವೇ?ಪಂಚೆ ಸಂತೋಷರ ಮೇಲೆ ಅಷ್ಟೊಂದು ಪ್ರೀತಿಯೇ " ಎಂದು ಬಿಜೆಪಿಯ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.