ಲಿಂಗಾಯತ ನಾಯಕತ್ವ ಹಾಗೂ BSY ಬೆಂಬಲಿಗರನ್ನು ಮುಗಿಸಿಹಾಕಲು ಸಂತೋಷ ಕೂಟ ಪಣ ತೊಟ್ಟಿದೆ: ಕಾಂಗ್ರೆಸ್

BJPvsRSS: ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ. ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ. 

Written by - Puttaraj K Alur | Last Updated : Jun 30, 2023, 09:31 PM IST
  • ಬಿ.ಎಸ್.ಯಡಿಯೂರಪ್ಪ & ಮುರುಗೇಶ್ ನಿರಾಣಿ ವಿರುದ್ಧ ಮಾತನಾಡಿದವರ ವಿರುದ್ಧ ನೋಟಿಸ್ ಇಲ್ಲ
  • ಬೊಮ್ಮಾಯಿ ವಿರುದ್ಧ ಮಾತನಾಡಿದ ಸಂಸದ ಪ್ರತಾಪ್ ಸಿಂಹರಿಗೆ ಶಿಸ್ತುಕ್ರಮದ ನೋಟಿಸ್ ಇಲ್ಲ
  • ಬಿಜೆಪಿಯಲ್ಲಿ ಶಿಸ್ತಿನ ಪಾಠ ಕೇವಲ ಬಿ.ಎಸ್.ಯಡಿಯೂಪ್ಪರ ಬ್ರಿಗೇಡ್‍ಗೆ ಮಾತ್ರವೇ?
ಲಿಂಗಾಯತ ನಾಯಕತ್ವ ಹಾಗೂ BSY ಬೆಂಬಲಿಗರನ್ನು ಮುಗಿಸಿಹಾಕಲು ಸಂತೋಷ ಕೂಟ ಪಣ ತೊಟ್ಟಿದೆ: ಕಾಂಗ್ರೆಸ್ title=
‘ಸಂತೋಷ’ಕೂಟದ ವಿರುದ್ಧ ಕಾಂಗ್ರೆಸ್ ಟೀಕೆ!

ಬೆಂಗಳೂರು: ಬಿಜೆಪಿಯಲ್ಲಿ ಲಿಂಗಾಯತ ನಾಯಕತ್ವವನ್ನು ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಬೆಂಬಲಿಗರನ್ನು ಸಂಪೂರ್ಣ ಮುಗಿಸಿಹಾಕಲು ಸಂತೋಷ ಕೂಟ ಪಣ ತೊಟ್ಟಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿಯಲ್ಲಿ ಶಿಸ್ತಿನ ಪಾಠ ಕೇವಲ BSY ಬ್ರಿಗೇಡ್‍ಗೆ ಮಾತ್ರವೇ? ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರ ವಿರುದ್ಧ ಮಾತನಾಡಿದ ಸಂಸದ ಪ್ರತಾಪ್ ಸಿಂಹರಿಗೆ ಶಿಸ್ತುಕ್ರಮದ ನೋಟಿಸ್ ಇಲ್ಲ. BSY ವಿರುದ್ಧ ಅಬ್ಭರಿಸಿದ್ದ ಬಸನಗೌಡ ಪಾಟೀಲ್ ಯತ್ನಾಳರಿಗೆ ನೋಟಿಸ್ ಇಲ್ಲ. ಮುರುಗೇಶ್ ನಿರಾಣಿ ವಿರುದ್ಧ ಮಾತನಾಡಿದವರಿಗೆ ನೋಟಿಸ್ ಇಲ್ಲ’ ಅಂತಾ ಕುಟುಕಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳ ಪುನರಾರಂಭ: ಸಿಎಂ ಸಿದ್ದರಾಮಯ್ಯ

‘ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ. ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲ, ನೋಟಿಸ್ ತೋರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ್ದಾರೆ ಯತ್ನಾಳ್. ಪಂಚೆ ಪಡೆಯ ಮಾತುಗಳು ಪಕ್ಷ ವಿರೋಧಿ ಎಸಿಕೊಳ್ಳುವುದಿಲ್ಲವೇ? ಚುನಾವಣೆ ಮುಗಿದ ನಂತರವೂ BSY ಬ್ರಿಗೇಡ್‍ನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ ನಳೀನ್ ಕುಮಾರ್ ಕಟೀಲ್? ಡಿಯರ್ ಬಿಜೆಪಿ ನೋಟಿಸ್ ಬಹಿರಂಗಪಡಿಸಿ 10 ಲಕ್ಷ ಬಹುಮಾನ ಪಡೆಯಿರಿ!’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

‘ಬಿಜೆಪಿಯ ಅಂತರಂಗದ ಸತ್ಯಗಳನ್ನು ನಾವು ಮೊದಲೇ ಹೇಳಿದ್ದೆವು, ಈಗ ಅವರ ಬಾಯಲ್ಲೇ ಹೊರಬರುತ್ತಿದೆ. ಬೊಮ್ಮಾಯಿಯವರು #PuppetCM ಆಗಿದ್ದರು ಎಂದಿದ್ದೆವು. ಇದೀಗ ಬೊಮ್ಮಾಯಿಯವರ ಕೈ ಕಟ್ಟಿ ಹಾಕಿದ್ದರು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಕಟೀಲ್ ನಾಮಕವಸ್ಥೆಯ ಅಸಮರ್ಥ ಅಧ್ಯಕ್ಷರು ಎಂದಿದ್ದೆವು. ಇದೀಗ ಕಟೀಲ್ ಸಂತೋಷ ಕೂಟದ ಕೈಗೊಂಬೆ ಎಂದಿದ್ದಾರೆ. ಬಿಎಸ್‍ವೈ ಅವರ ಪದಚ್ಯುತಿ ಹಿಂದೆ ಸಂತೋಷ ಕೂಟದ ಆಟವಿದೆ ಎಂದಿದ್ದೆವು. ಇದೇ ವಿಷಯವನ್ನು ಇಂದು ಬಿಜೆಪಿಗರು ಹೇಳುತ್ತಿದ್ದಾರೆ. ವಲಸಿಗರನ್ನು ಬಿಜೆಪಿ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದಿದ್ದೆವು. ಕೆ.ಎಸ್.ಈಶ್ವರಪ್ಪ ಈಗ ಹಾಗೆಯೇ ಮಾತಾಡಿದ್ದಾರೆ. ಈಗ #BJPvsRSS ಆಟ ಶುರುವಾಗಿದೆ. ಪಂಚೆ ಪಡೆ ಗೆಲ್ಲುವುದೋ, BSY ಬ್ರಿಗೇಡ್ ಗೆಲ್ಲುವುದೋ ಕಾಲವೇ ಉತ್ತರಿಸಲಿದೆ’ ಅಂತಾ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗೆ ಲಿಂಗಾಯತರು ಹಾಗೂ BSY ಬೆಂಬಲಿಗರು ಬಿಟ್ಟಿ ಸಿಕ್ಕಿದ್ದಾರಾ? ಎಂ.ಪಿ.ರೇಣುಕಾಚಾರ್ಯ ಅವರ ಪ್ರಶ್ನೆಯಲ್ಲಿ ನ್ಯಾಯವಿದೆ ಅಲ್ಲವೇ ಬಿ.ಎಲ್.ಸಂತೋಷ್ ಅವರೇ? ಪ್ರತಾಪ್ ಸಿಂಹ, ಯತ್ನಾಳ್, ಸಿಪಿ ಯೋಗಿಶ್ವರ್, ಸಿಟಿ ರವಿ ಮತ್ತು ಈಶ್ವರಪ್ಪನವರಿಗಿಲ್ಲದ ನೋಟಿಸ್ ಕೇವಲ ಪಂಚೆ ಕೊಡವಿದ ರೇಣುಕಾಚಾರ್ಯರಿಗೆ ಏಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News