Davanagere News: 31.34 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧನ

ನಗರದ ವಿದ್ಯಾನಗರವೊಂದರಲ್ಲಿ ಮನೆ ಬಾಗಿಲು ಮುರಿದು  31.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳ್ಳರಿಂದ 23.35 ಲಕ್ಷ ಚಿನ್ನಾಭರಣ, 60 ಸಾವಿರ ಮೌಲ್ಯದ ಬೆಳ್ಳಿ ಆಭರಣ, ಎರಡು ಬೈಕ್ ಗಳ ಜಪ್ತಿ ಮಾಡಿದ್ದಾರೆ.

Written by - Manjunath N | Last Updated : Jul 8, 2023, 01:56 PM IST
  • ಕಳ್ಳತನದ ಘಟನೆಯು ದಾವಣಗೆರೆ ಹೊರಭಾಗದ ಡಾಲರ್ಸ್ ಕಾಲೋನಿಯಲ್ಲಿ ವಾಸವಾಗಿದ್ದ ತಿಪ್ಪೇಸ್ವಾಮಿ ಎನ್ನುವವರ ಮನೆಯಲ್ಲಿ ನಡೆದಿತ್ತು.
  • ವರು ಜೂನ್ 3 ರಂದು ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.
  • ಯಾರೂ ಇಲ್ಲದ ಸಮಯವನ್ನು ಬಳಿಸಿಕೊಂಡು ಕಳ್ಳರು ಮನೆಯಲ್ಲಿ ಕಳ್ಳತನ ಮಾಡಿದ್ದರು.
 Davanagere News: 31.34 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧನ title=

ದಾವಣಗೆರೆ:  ನಗರದ ವಿದ್ಯಾನಗರವೊಂದರಲ್ಲಿ ಮನೆ ಬಾಗಿಲು ಮುರಿದು  31.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳ್ಳರಿಂದ 23.35 ಲಕ್ಷ ಚಿನ್ನಾಭರಣ, 60 ಸಾವಿರ ಮೌಲ್ಯದ ಬೆಳ್ಳಿ ಆಭರಣ, ಎರಡು ಬೈಕ್ ಗಳ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಬಸದಿಯಿಂದ ನಾಪತ್ತೆಯಾಗಿದ್ದ ʼಜೈನ ಮುನಿʼ ಬರ್ಬರ ಹತ್ಯೆ..!

ಈ ಘಟನೆ ಕುರಿತಾಗಿ ನಗರದ ವಿದ್ಯಾನಗರದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿ ಪೊಲೀಸರು ರಾಣೆಬೆನ್ನೂರಿನ ಶಿವರಾಜ್,ಮಾರುತಿ,ಸುನೀಲ್,ಮನೋಜ್, ಅಭಿಷೇಕ, ಮಾಲತೇಶ್ ಎನ್ನುವವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಕಿತ್ತೂರು ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ

ಕಳ್ಳತನದ ಘಟನೆಯು ದಾವಣಗೆರೆ ಹೊರಭಾಗದ ಡಾಲರ್ಸ್ ಕಾಲೋನಿಯಲ್ಲಿ ವಾಸವಾಗಿದ್ದ ತಿಪ್ಪೇಸ್ವಾಮಿ ಎನ್ನುವವರ ಮನೆಯಲ್ಲಿ ನಡೆದಿತ್ತು.ಅವರು ಜೂನ್ 3 ರಂದು ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.ಯಾರೂ ಇಲ್ಲದ ಸಮಯವನ್ನು ಬಳಿಸಿಕೊಂಡು ಕಳ್ಳರು ಮನೆಯಲ್ಲಿ ಕಳ್ಳತನ ಮಾಡಿದ್ದರು.

ಜೂನ್ 4 ರಂದು ಅವರು ಮನೆಗೆ ವಾಪಸ್ ಬಂದು ನೋಡಿದಾಗ ಕಳ್ಳರು ಮನೆ ಬಾಗಿಲು ಮುರಿದು ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.ಇದಾದ ಬೆನ್ನಲ್ಲೇ ಈ ಬಗ್ಗೆ ತಿಪ್ಪೇಸ್ವಾಮಿ ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗ ಒಂದು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News