ಕರಾಚಿ : ಪಾಕಿಸ್ತಾನದ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ಮುಂಜಾನೆ ನಡೆದ ಬಾಂಬ್ ಸ್ಫೋಟದಲ್ಲಿ 14 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕ್ವೆಟ್ಟಾದ ಹಝಾರ್ಗಾಂಜಿ ಪ್ರದೇಶದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿಯಾದ ಹಝಾರ ಸಮುದಾಯಕ್ಕೆ ಸೇರಿದ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಬಾಂಬ್ ಸ್ಫೋಟದಲ್ಲಿ ಮಾರುಕಟ್ಟೆ ಸಮೀಪದ ಕಟ್ಟಡಗಳೂ ಹಾನಿಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.