ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಟೊಂಕ ಕಟ್ಟಿ ನಿಂತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ರಾಜ್ಯದ ಮೂರು ಕಡೆ ಜೆಡಿಎಸ್-ಕಾಂಗ್ರೆಸ್ ಜಂಟಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ಮಧ್ಯಾಹ್ನ 12ಗಂಟೆಗೆ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಬಳಿಕ ಮಧ್ಯಾಹ್ನ 3 ಗಂಟೆಗೆ ಹೆಲಿಕ್ಯಾಪ್ಟರ್ನಲ್ಲಿ ಚಿತ್ರದುರ್ಗಕ್ಕೆ ತೆರಳಿ ಮತಯಾಚನೆ ಮಾಡಲಿರುವ ರಾಹುಲ್, ಸಂಜೆ ಸಂಜೆ 5.30ಕ್ಕೆ ಕೆ.ಆರ್.ನಗರದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೋಸ್ತಿ ಪಕ್ಷಗಳ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.